ಬೆಂಗಳೂರು: ಮಸೀದಿಗಳ ಮೇಲೆ ಧ್ವನಿವರ್ಧಕ ತೆಗೆಸಬೇಕೆಂದು ಒತ್ತಾಯಿಸಿ, ಶ್ರೀರಾಮಸೇನೆ ಇಂದಿನಿಂದ ದೇವಸ್ಥಾನಗಳಲ್ಲಿ ಸುಪ್ರಭಾತ ಹಾಕುತ್ತಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪರಿಷತ್ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಸುಪ್ರಭಾತ ಅಭಿಯಾನ ನಡೆಸುತ್ತಿರುವವರು ಭಯೋತ್ಪಾದಕರು ಎಂದಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಯಾರು ಈ ಅಭಿಯಾನವನ್ನು ಪ್ರಾರಂಭ ಮಾಡುತ್ತಾರೆ ಅವರು ಭಯೋತ್ಪಾದಕರು. ಅವರನ್ನು UAPA ಅಡಿಯಲ್ಲಿ ಬಂಧಿಸಬೇಕಾಗುತ್ತದೆ. ಇವರು ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಇಂತಹ ಅಭಿಯಾನ ಶುರು ಮಾಡಿದ್ದಾರೆ. ಇವರೆಲ್ಲಾ ಸಂಘ ಪರಿವಾರದ ಆಕ್ಟೋಪಸ್ ಇದ್ದಂತೆ. ಶಾಂತಿ ಕದಡುವ ಕೆಲಸ ಮಾಡುತ್ತಾರೆ. ಅವರನ್ನು UAPA ಅಡಿಯಲ್ಲಿ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನು ಶ್ರೀರಾಮಸೇನೆ ರಾಜ್ಯದ ಹಲವೆಡೆ ಇಂದಿನಿಂದ ಆಜಾನ್ ಗೆ ವಿರುದ್ಧವಾಗಿ ಸುಪ್ರಭಾತ ಹಾಕಿದ್ದಾರೆ. ಮಸೀದಿಗಳ ಮೇಲಿನ ಮೈಕ್ ಗಳನ್ನು ತೆಗೆಸುವವರೆಗೂ ಇದೇ ರೀತಿ ಸುಪ್ರಭಾತ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.






GIPHY App Key not set. Please check settings