ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬಳ್ಳಾರಿಗೆ ಪ್ರವೇಶ ಪಡೆಯುವುದಕ್ಕೆ ಸಾಕಷ್ಟು ಪ್ರಯತ್ನಗಳ ನಡುವೆ ಇದೀಗ ಸುಪೀಂ ಕೋರ್ಟ್ ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡಿದೆ. ಒಂದು ತಿಂಗಳ ಮಟ್ಟಿಗೆ ಮಾತ್ರ ಬಳ್ಳಾರಿಯಲ್ಲಿ ಇರಬಹುದು ಎಂದು ಆದೇಶ ನೀಡಿದೆ.
ಈಗ ಬಳ್ಳಾರಿಗೆ ಹೋದರು ನವೆಂಬರ್ 6ರಂದು ಜನಾರ್ದನ್ ರೆಡ್ಡಿ ಬಳ್ಳಾರಿ ತೊರೆಯಬೇಕಾಗಿದೆ. ಸುಪ್ರೀಂ ಕೋರ್ಟ್ ಗಡುವಿನಂತೆ ನಡೆದುಕೊಳ್ಳಬೇಕು. ಬಳಿಕ ಪ್ರಕರಣದ ಇತ್ಯರ್ಥ ಆಗುವವರೆಗೂ ಬಳ್ಳಾರಿಗೆ ಹೋಗುವಂತೆ ಇಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಮಗಳ ಮದುವೆಯನ್ನು ಜನಾರ್ದನ ರೆಡ್ಡಿ ಅದ್ದೂರಿಯಾಗಿ ಮಾಡಿದ್ದರು. ಈಗ ಮಗುವಿನ ತಾಯಿಯಾಗಿದ್ದಾರೆ. ಅವರನ್ನು ನೋಡಿಕೊಳ್ಳಬೇಕು ಎಂಬ ಕಾರಣದಿಂದ ಇತ್ತಿಚೆಗೆ ತಮ್ಮ ಮನೆ ದೇವರ ಮೊರೆ ಹೋಗಿದ್ದರು. ಮಗಳಿಗಾಗಿ ಬಳ್ಳಾರಿಗೆ ಹೋಗಲು ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಇದೀಗ ಆ ಮನವಿಯಂತೆ ಒಂದು ತಿಂಗಳ ಮಟ್ಟಿಗೆ ಅನುಮತಿಯನ್ನು ನೀಡಿದೆ.
ಬಹುಕೋಟಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಜನಾರ್ದನ ರೆಡ್ಡಿ ಜೈಲುವಾಸ ಅನುಭವಿಸಿದ್ದರು. ಬಳಿಕ 2015ರಲ್ಲಿ ಜಾಮೀನು ಪಡೆದು ಹೊರಗಿದ್ದು, ಆ ಪ್ರಕರಣದ ತನಿಖೆ ಇನ್ನು ನಡೆಯುತ್ತಿದೆ. ಆದಷ್ಟು ಬೇಗ ವಿಚಾರಣೆ ನಡೆಸಿ ಪ್ರಕರಣ ಇತ್ಯರ್ಥ ಮಾಡಿ ಎಂದು ಜನಾರ್ದನ ರೆಡ್ಡಿ ಕೂಡ ಮನವಿ ಮಾಡಿದ್ದಾರೆ.
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 23…
ಬೆಳಗಾವಿ; ಕಾಂಗ್ರೆಸ್ ಸರ್ಕಾರದಲ್ಲಿ ಸದ್ಯ ಸಿಎಂ ಬದಲಾವಣೆ ಚರ್ಚೆ ಹಾಗೂ ಕೆಪಿಸಿಸಿ ಅಧ್ಯಕ್ಷರ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ನಲ್ಲಿ…
ಸುದ್ದಿಒನ್, ಚಿತ್ರದುರ್ಗ, ಫೆ.23: ಚಿತ್ರದುರ್ಗ ಅಪ್ಪು ಗೆಳೆಯರ ಬಳಗ ವತಿಯಿಂದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವಕ ಸ್ವಾಮೀಜಿರವರ ನೇತೃತ್ವದಲ್ಲಿ, ಹಳೇ…
ಬೆಂಗಳೂರು; ಇನ್ನೊಂದು ವಾರವಷ್ಟೇ ಶೈಕ್ಷಣಿಕ ವರ್ಷದ ಪರೀಕ್ಷೆಗಳು ಆರಂಭವಾಗುತ್ತವೆ. ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿವೆ.…
ಇಂದು ಭಾರತ ವರ್ಸಸ್ ಪಾಕ್ ಪಂದ್ಯ ನಡೆಯಲಿದೆ. ಸಾಂಪ್ರಾದಾಯಿಕ ವೈರಿಗಳನ್ನು ಕಟ್ಟಿ ಹಾಕಲು ಭಾರತ ತಂಡ ಸಜ್ಜಾಗಿದೆ. ಈ ಪಂದ್ಯವನ್ನ…
ಸುದ್ದಿಒನ್ : ಪ್ರಪಂಚದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಇಂದು ಮಧ್ಯಾನ್ಹ 2.30 ಕ್ಕೆ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಭಾರತ vs ಪಾಕಿಸ್ತಾನ…