Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಯಾಮರಣದ ಕುರಿತು ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ಪ್ರಕಟ

---Advertisement---

13 ವರ್ಷಗಳ ಹಿಂದೆ ಸಂಭವಿಸಿದ ಅಪಘಾತವೊಂದರಲ್ಲಿ ತೀವ್ರ ಮಿದುಳಿನ ಗಾಯಕ್ಕೆ ಒಳಗಾಗಿ ಕೋಮಾದಲ್ಲಿದ್ದ 32 ವರ್ಷದ ಹರೀಶ್ ರಾಣಾ ಅವರಿಗೆ ಗೌರವಯುತವಾಗಿ ಸಾಯಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಇದು ದೇಶದ ನ್ಯಾಯಾಂಗ ಇತಿಹಾಸದಲ್ಲೇ ನ್ಯಾಯಾಲಯದ ಆದೇಶದ ಮೇರೆಗೆ ನೀಡಲಾದ ಮೊದಲ ‘ಪರೋಕ್ಷ ದಯಾಮರಣ’ (Passive Euthanasia) ಪ್ರಕರಣವಾಗಿದೆ.

ತೀವ್ರ ಮಿದುಳಿನ ಗಾಯದಿಂದ ಚೇತರಿಸಿಕೊಳ್ಳುವ ಯಾವುದೇ ಸಾಧ್ಯತೆ ಇಲ್ಲದ ಹಿನ್ನೆಲೆಯಲ್ಲಿ, ಅವರಿಗೆ ನೀಡಲಾಗುತ್ತಿರುವ ಕೃತಕ ಆಹಾರ ಮತ್ತು ವೈದ್ಯಕೀಯ ಚಿಕಿತ್ಸೆಯನ್ನು ಹಿಂಪಡೆಯುವ ಮೂಲಕ ‘ಪರೋಕ್ಷ ದಯಾಮರಣ’ಕ್ಕೆ (Passive Euthanasia) ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು ಅನುಮತಿ ನೀಡಿದೆ.

ತಮ್ಮ ಮಗನ ನರಕಯಾತನೆಯನ್ನು ನೋಡಲಾರದೆ ಹರೀಶ್ ರಾಣಾ ಅವರ ಪೋಷಕರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಅಂತಿಮವಾಗಿ ಸುಪ್ರೀಂ ಕೋರ್ಟ್ ವೈದ್ಯಕೀಯ ಚಿಕಿತ್ಸೆಯನ್ನು ಹಿಂಪಡೆಯಲು ಅನುಮತಿ ನೀಡುವ ಮೂಲಕ ಹರೀಶ್ ರಾಣಾ ಅವರಿಗೆ ‘ಗೌರವಯುತ ಸಾವು’ ಕಾಣಲು ಹಾದಿ ಮಾಡಿಕೊಟ್ಟಿದೆ.

ಈ ತೀರ್ಪು ಭವಿಷ್ಯದಲ್ಲಿ ಚೇತರಿಕೆಯ ಸಾಧ್ಯತೆಯೇ ಇಲ್ಲದ ಮತ್ತು ಕೃತಕವಾಗಿ ಆಹಾರ ನೀಡುವ ಮೂಲಕ ಜೀವಂತವಾಗಿರಿಸಲಾದ ಸಾವಿರಾರು ರೋಗಿಗಳ ಹಿತದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ. ಬದುಕುವ ಹಕ್ಕಿನಂತೆಯೇ ಪ್ರತಿಯೊಬ್ಬರಿಗೂ ಘನತೆಯಿಂದ ಸಾಯುವ ಹಕ್ಕಿದೆ ಎಂಬುದನ್ನು ಈ ತೀರ್ಪು ಎತ್ತಿ ಹಿಡಿದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now