Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನಟ ದರ್ಶನ್ ಗೆ 21 ದಿನಗಳ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್ ; ಮುಂದೇನು..?

---Advertisement---

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್ ವಿಚಾರಣೆಯನ್ನು 21 ದಿನಗಳ ಕಾಲ ಮುಂದೂಡಿಕೆ ಮಾಡಿದೆ. ಈ ಮೂಲಕ ನಟ ದರ್ಶನ್ ಅವರಿಗೆ ಮುಂದಿನ ವಿಚಾರಣೆಯ ತನಕ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹದಿನೇಳು ಮಂದಿ ಜೈಲು ಪಾಲಾಗಿದ್ದರು. ಹೈಕೋರ್ಟ್ ಈ ಹದಿನೇಳು ಮಂದಿಗೂ ಷರತ್ತು ಬದ್ಧ ಜಾಮೀನನ್ನು ನೀಡಿತ್ತು. ಈ ಜಾಮೀನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇಂದು ವಿಚಾರಣೆಯನ್ನು ಆಲಿಸಿದ ಸುಪ್ರೀಂ ಕೋರ್ಟ್ ಇದೀಗ ವಿಚಾರಣೆಯನ್ನು 21 ದಿನಗಳು ಮುಂದಕ್ಕೆ ಹಾಕಿದೆ.

ಈ ಅರ್ಜಿ ವಿಚಾರಣೆಯನ್ನು ಏಪ್ರಿಲ್ 2 ರಂದು ವಿಚಾರಣೆ ನಡೆಸಿತ್ತು. ಇಂದಿಗೆ ಮುಂದೂಡಿಕೆ ಮಾಡಿದ್ದ ಅರ್ಜಿ ವಿಚಾರಣೆಯನ್ನು ಇಂದು ನಡೆಸಿದ ಸುಪ್ರೀಂ ಕೋರ್ಟ್ ಮತ್ತೆ ಮುಂದೂಡಿಕೆ ಮಾಡಿದೆ. ಇಂದು ವಿಚಾರಣೆ ನಡೆಸಿದ ನ್ಯಾ.ಜೆ.ಬಿ.ಪರ್ದಿವಾಲ, ನ್ಯಾ.ಆರ್.ಮಹದೇವನ್ ಅವರ ದ್ವಿಸದಸ್ಯ ಪೀಠ ಹಲವು ಪ್ರಶ್ನೆಗಳನ್ನು ಕೇಳಿದ್ದು, ಇನ್ನಷ್ಟು ವಿಚಾರಣೆಯ ಅಗತ್ಯವಿದರ ಎಂದು ಮೇ 14ಕ್ಕೆ ಮುಂದೂಡಿಕೆ ಮಾಡಿದೆ. ನಟ ದರ್ಶನ್ ಪರವಾಗಿ ಖ್ಯಾತ ವಕೀಲ ಅಭಿಷೇಕ್ ಮನು ಸಂಘ್ವಿ ವಾದ ಮಂಡಿಸಿದರು. ಬೆಂಗಳೂರು ನಗರ ಪೊಲೀಸ್ ಪರವಾಗಿ ಸಿದ್ದಾರ್ಥ ಲೂಥ್ರಾ ವಕಾಲತ್ತು ವಹಿಸಿದ್ದರು. ದರ್ಶನ್ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ. ಕಕ್ಷಿದಾರರು ನಿರಪರಾಧಿಗಳು ಎಂದು ಮನು ಸಂಘ್ವಿ ಹಲವು ವಿಷಯಗಳನ್ನು ಪ್ರಸ್ತಾಪ ಮಾಡಿದರು. ಇದಕ್ಕೆ ವಕೀಲ ಸಿದ್ದಾರ್ಥ ಕೂಡ ಸಾಕ್ಷ್ಯಗಳು ಲಭ್ಯವಿರುವ ಮಾಹಿತಿ ನೀಡಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...