ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ನವದೆಹಲಿ: ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಾಸಕ ವಿನಯ್ ಗೌಡಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ವಿನಯ್ ಕುಲಕರ್ಣಿ ಪರ ವಾದ ಮಂಡಿಸಿದ್ದ ವಕೀಲ ಶರಣಗೌಡ ಪಾಟೀಲ್ ಅವರ ತಂಡ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ ಇನ್ನೆರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಲಾಗಿದೆ.
ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ನ ನ್ಯಾ.ಸಂಜಯ್ ಕರೋಲ್ ನೇತೃತ್ವದ ದ್ವಿಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ. ವಿನಯ್ ಕುಲಕರ್ಣಿ ಪರ ವಕೀಲರು ವಾದ ಮಂಡಿಸಿ, ಈಗಾಗಲೇ ಸಾಕ್ಷ್ಯಗಳ ವಿಚಾರಣೆ ಮುಕ್ತಾಯವಾಗಿದೆ. ಈ ಹಂತದಲ್ಲಿ ಸಾಕ್ಷ್ಯ ನಾಶವಾಗಲಿ ಅಥವಾ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವುದಕ್ಕೆ ಸಾಧ್ಯವಿಲ್ಲ. ಪ್ರಕರಣ ಇತರೆ ಆರೋಪಿಗಳಿಗೆ ಈಗಾಗಲೇ ಜಾಮೀನು ನೀಡಲಾಗಿದೆ. ವಿನಯ್ ಕುಲಕರ್ಣಿ ಅವರಿಗೂ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು.
ವಾದ ಪ್ರತಿವಾದ ಆಲಿಸಿದ ಕೋರ್ಟಗ ಜಾಮೀನು ಮಂಜೂರಿಗೆ ಆದೇಶ ನೀಡಿತು. ಅಲ್ಲದೆ ಇನ್ನೆರಡು ತಿಂಗಳಲ್ಲಿ ವಿಚಾರಣೆ ಮುಕ್ತಾಯಗೊಳಿಸಲು ಸೂಚನೆ ನೀಡಿದೆ. 2016ರಲ್ಲಿ ಈ ಕೊಲೆ ಪ್ರಕರಣ ನಡೆದಿತ್ತು. ಸ್ಥಳೀಯ ಪೊಲೀಸರ ಬಳಿಕ ಸಿಬಿಐ ಈ ಕೇಸನ್ನ ಕೈಗೆತ್ತಿಕೊಂಡಿತ್ತು. ಆಗ ವಿನಯ್ ಕುಲಕರ್ಣಿಯನ್ನ ಆರೋಪಿಯನ್ನಾಗಿ ಪರಿಗಣಿಸಿ ಬಂಧನ ಕೂಡ ಮಾಡಿತ್ತು. ಸಾಕ್ಷಿಗಳ ನಾಶ ಮಾಡುತ್ತಾರೆ ಎಂಬ ಕಾರಣಕ್ಕೆ ಸುಪ್ರೀಂ ಕೋರ್ಟ್ 2025ರಲ್ಲಿ ಜಾಮೀನನ್ನು ರದ್ದು ಮಾಡಿತ್ತು. ಇದೀಗ ಸಾಕ್ಷಿಗಳ ವಿಚಾರಣೆ ಮುಗಿದಿದ್ದು ಮತ್ತೆ ಜಾಮೀನು ನೀಡಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್