Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸುಪ್ರೀಂ ಕೋರ್ಟ್ ನಿಂದ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು

---Advertisement---

 

ನವದೆಹಲಿ: ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಾಸಕ ವಿನಯ್ ಗೌಡಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ‌. ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ವಿನಯ್ ಕುಲಕರ್ಣಿ ಪರ ವಾದ ಮಂಡಿಸಿದ್ದ ವಕೀಲ ಶರಣಗೌಡ ಪಾಟೀಲ್ ಅವರ ತಂಡ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ ಇನ್ನೆರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಲಾಗಿದೆ.

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ನ ನ್ಯಾ.ಸಂಜಯ್ ಕರೋಲ್ ನೇತೃತ್ವದ ದ್ವಿಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ. ವಿನಯ್ ಕುಲಕರ್ಣಿ ಪರ ವಕೀಲರು ವಾದ ಮಂಡಿಸಿ, ಈಗಾಗಲೇ ಸಾಕ್ಷ್ಯಗಳ ವಿಚಾರಣೆ ಮುಕ್ತಾಯವಾಗಿದೆ. ಈ ಹಂತದಲ್ಲಿ ಸಾಕ್ಷ್ಯ ನಾಶವಾಗಲಿ ಅಥವಾ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವುದಕ್ಕೆ ಸಾಧ್ಯವಿಲ್ಲ. ಪ್ರಕರಣ ಇತರೆ ಆರೋಪಿಗಳಿಗೆ ಈಗಾಗಲೇ ಜಾಮೀನು ನೀಡಲಾಗಿದೆ. ವಿನಯ್ ಕುಲಕರ್ಣಿ ಅವರಿಗೂ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು.

ವಾದ ಪ್ರತಿವಾದ ಆಲಿಸಿದ ಕೋರ್ಟಗ ಜಾಮೀನು ಮಂಜೂರಿಗೆ ಆದೇಶ ನೀಡಿತು. ಅಲ್ಲದೆ ಇನ್ನೆರಡು ತಿಂಗಳಲ್ಲಿ ವಿಚಾರಣೆ ಮುಕ್ತಾಯಗೊಳಿಸಲು ಸೂಚನೆ ನೀಡಿದೆ. 2016ರಲ್ಲಿ ಈ ಕೊಲೆ ಪ್ರಕರಣ ನಡೆದಿತ್ತು. ಸ್ಥಳೀಯ ಪೊಲೀಸರ ಬಳಿಕ ಸಿಬಿಐ ಈ ಕೇಸನ್ನ ಕೈಗೆತ್ತಿಕೊಂಡಿತ್ತು. ಆಗ ವಿನಯ್ ಕುಲಕರ್ಣಿಯನ್ನ ಆರೋಪಿಯನ್ನಾಗಿ ಪರಿಗಣಿಸಿ ಬಂಧನ ಕೂಡ ಮಾಡಿತ್ತು. ಸಾಕ್ಷಿಗಳ ನಾಶ ಮಾಡುತ್ತಾರೆ ಎಂಬ ಕಾರಣಕ್ಕೆ ಸುಪ್ರೀಂ ಕೋರ್ಟ್ 2025ರಲ್ಲಿ ಜಾಮೀನನ್ನು ರದ್ದು ಮಾಡಿತ್ತು. ಇದೀಗ ಸಾಕ್ಷಿಗಳ ವಿಚಾರಣೆ ಮುಗಿದಿದ್ದು ಮತ್ತೆ ಜಾಮೀನು ನೀಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now