Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ದರ್ಶನ್ ಜಾಮೀನು ರದ್ದುಕೋರಿ ಅರ್ಜಿ ; ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

---Advertisement---

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಮಾರು ಏಳು ತಿಂಗಳ ಕಾಲ ಜೈಲು ವಾಸ ಅನುಭವಿಸಿದ್ದ ದರ್ಶನ್ ಅಂಡ್ ಗ್ಯಾಂಗ್ ಬಳಿಕ ಜಾಮೀನಿನ ಮೇಲೆ ಹೊರ ಬಂದಿದೆ. ಅದರಲ್ಲೂ ಒಂದಷ್ಟು ಮಂದಿಗೆ ಕೆಳಹಂತದ ನ್ಯಾಯಾಲಯದಲ್ಲಿಯೇ ಜಾಮೀನು ಸಿಕ್ಕಿತ್ತು. ಇದೀಗ ರಾಜ್ಯ ಪೊಲೀಸ್ ಇಲಾಖೆ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ಏಪ್ರಿಲ್ 22ಕ್ಕೆ‌ ಮುಂದೂಡಿಕೆ ಮಾಡಿದೆ.

ರಾಜ್ಯದ ಪರವಾಗಿ ವಕೀಲ ಸಿದ್ದಾರ್ಥ್ ಲೂಥ್ರಾ ಅವರು ಅರ್ಜಿಯ ಉಲ್ಲೇಖ ಮಾಡಿದರು. ಬಳಿಕ ನ್ಯಾಯಮೂರ್ತಿಗಳು ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿಕೆ ಮಾಡಿದ್ದಾರೆ. ಮುಂದಿನ ವಿಚಾರಣೆ ಏಪ್ರಿಲ್ 22ಕ್ಕೆ ನಡೆಯಲಿದ್ದು, ದರ್ಶನ್ ಪರವಾಗಿ ಇಲ್ಲಿಯೂ ವಕೀಲ ನಾಗೇಶ್ ಅವರೇ ವಕಾಲತ್ತು ವಹಿಸಲಿದ್ದಾರೆ. ಸುಪ್ರೀಂಕೋರ್ಟ್ ನಲ್ಲಿ ಕೇಸ್ ಏನಾಗಬಹುದು..? ಜಾಮೀನು ಏನಾದರೂ ರದ್ದಾಗಲಿದೆಯಾ ಎಂಬ ಪ್ರಶ್ನೆಗಳನ್ನು ಜನರನ್ನು ಕಾಡುತ್ತಿವೆ.

ನಟ ದರ್ಶನ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಮೊದಲೇ ಜಾಮೀನು ಪಡೆದಿದ್ದರು. ಸದ್ಯ ಅರ್ಧದಲ್ಲಿಯೇ ನಿಂತು ಹೋಗಿದ್ದ ಡೆವಿಲ್ ಸಿನಿಮಾದ ಶೂಟಿಂಗ್ ನಲ್ಲಿ ಮತ್ತೆ ಭಾಗಿಯಾಗಿದ್ದಾರೆ. ರಾಜಸ್ಥಾನದಲ್ಲಿ ಶೂಟಿಂಗ್ ಗೆಂದು ತೆರಳಿದ್ದಾರೆ. ಡೆವಿಲ್ ಸಿನಿಮಾಗಾಗಿ ಸಾಕಷ್ಟು ಮಂದಿ ಕಾಯುತ್ತಿದ್ದಾರೆ. ಇದೇ ರೇಣುಕಾಸ್ವಾಮಿ ಕೊಲೆ ಪ್ರಕರಣದಿಂದ ಕಳೆದ ವರ್ಷ ದರ್ಶನ್ ಅವರ ಸಿನಿಮಾ ರಿಲೀಸ್ ಆಗಿರಲಿಲ್ಲ. ಈ ವರ್ಷ ದರ್ಶನ್ ಅವರ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಡೆವಿಲ್ ಸಿನಿಮಾ ತೆರೆಗೆ ಬರಲಿದೆ ಎಂಬ ಕಾತುರ ಇದ್ದು, ನೋಡುವುದಕ್ಕಾಗಿ ಕಾಯುತ್ತಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...