ಯುಜಿಸಿ ನಿಯಮಗಳಿಗೆ ಸುಪ್ರೀಂ ತಡೆ..!

ನವದೆಹಲಿ: ಯುಜಿಸಿಯ ಹೊಸ ನಿಯಮಕ್ಕೆ‌ ಎಲ್ಲೆಡೆ ಸಾಕಷ್ಟು ವಿರೋಧ ಕೇಳಿ ಬಂದಿತ್ತು. ಜಾತಿ ತಾರತಮ್ಯ ತಡೆಗೆ ಕೇಂದ್ರ ಸರ್ಕಾರ ಹೊಸದೊಂದು ನಿಯಮವನ್ನು ಜಾರಿ ಮಾಡಿತ್ತು. ಕಾಲೇಜಿ, ವಿವಿಗಳಲ್ಲಿ ಎಸ್ಸಿ, ಎಸ್ಟಿ, ಒಬಿಸಿ, ಆರ್ಥಿಕವಾಗಿ ಹಿಂದುಳಿದ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳ ಮೇಲೆ ಜನರಲ್ ಕೆಟಗರಿ ವಿದ್ಯಾರ್ಥಿಗಳು ಜಾತಿ ನಿಂದನೆ ಮಾಡಿದರೆ, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬಹುದು. ಅವರಿಗೆ ಹತ್ತು ವರ್ಷ ಜೈಲು ಶಿಕ್ಷೆ ಎಂಬ ನಿಯಮವನ್ನು ಜಾರಿಗೆ ತರಲಾಗಿತ್ತು. ಇದಕ್ಕೆ ಬಾರಿ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ತುಂಬಾ ಅಪಾಯಕಾರಿ ಪರಿಣಾಮಗಳಿಗೆ ಕಾರಣವಾಗಬಹುದು ಎಂಬ ಅಭಿಪ್ರಾಯಪಟ್ಟು ಜಾತಿ ಆಧಾರಿತ ತಾರತಮ್ಯ ತಡೆಯುವುದಕ್ಕೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ ಹೊರಡಿಸಿರುವ ನಿಯಮಾವಳಿಗಳಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಈ ನಿಯಮಾವಳಿಗಳ ದೂರು ಪರಿಹಾರ ವ್ಯವಸ್ಥೆಯಿಂದ ಸಾಮಾನ್ಯ ವರ್ಗದ ವಿದ್ಯಾರ್ಥಿಗಳನ್ನು ಹೊರಗಿಟ್ಟಿರುವುದು ತಾರತಮ್ಯ ಉಂಟು ಮಾಡುವಂತಿದೆ.

ಜನವರಿ 13ರಿಂದ ಜಾರಿಗೆ ಬಂದಿರುವ ಯುಜಿಸಿ ನಿಯಮಾವಳಿ 2026 ನಿಯಮಾವಳಿ ದೇಶದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುತ್ತಿತ್ತು. ಈ ನಿಯಮದ ವಿರುದ್ಧ ದೇಶದ ಹಲವು ಕಡೆ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿದಿದ್ದರು. ಸಾಮಾನಿಕ ಜಾಲತಾಣದಲ್ಲೂ ಯುಜಿಸಿ ವಿರುದ್ಧ ಟೀಕರ ವ್ಯಕ್ತವಾಗಿತ್ತು. ಸುಪ್ರೀಂ ಆದೇಶದಿಂದ ಈ ನಿಯಮಾವಳಿಗೆ ಸದ್ಯಕ್ಕೆ ತಡೆ ಬಿದ್ದಿದೆ. ನ್ಯಾಯಾಲಯ ಹಸ್ತಕ್ಷೇಪ ಮಾಡದಿದ್ದರೆ ಗಂಭೀರ ಪರಿಣಾಮ ಉಂಟಾಗುವ ಸಾಧ್ಯತೆ ಇದ್ದು ಸಮಾಜದಲ್ಲಿ ವಿಭಜನೆಗೆ ಕಾರಣವಾಗಬಹುದು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜೊಯಮಲ್ಯ , ಬಾಗ್ಚಿ ಅವರಿದ್ದ ಪೀಠ ಅಭಿಪ್ರಾಯಪಟ್ಟಿತು.

Share This Article
Enable Notifications OK No thanks