ಹಾಸನ : ಪರಿಷತ್ ಚುನಾವಣೆಗೆ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಸಿ ಪ್ರಚಾರ ಕಾರ್ಯ ಶುರು ಮಾಡಿದ್ದಾರೆ. ಈ ಬೆನ್ನಲ್ಲೇ ಸೂರಜ್ ರೇವಣ್ಣ ಅವರ ನಾಮಪತ್ರವನ್ನ ತಿರಸ್ಕರಿಸುವಂತೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ.
ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡೆವಿಟ್ ನಲ್ಲಿ ಮದುವೆಯಾಗಿರುವ ವಿಚಾರವನ್ನ ಮುಚ್ಚಿಟ್ಟಿದ್ದಾರೆಂದು ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಕುಂದೂರು ಗ್ರಾಮ ಪಂಚಾಯ್ತಿ ಸದಸ್ಯ ಕೆ ಎಲ್ ಹರೀಶ್ ಅವರು ಈ ಅರ್ಜಿ ಸಲ್ಲಿಸಿದ್ದಾರೆ. ಆ ಅರ್ಜಿಯಲ್ಲಿ ಸೂರಜ್ ರೇವಣ್ಣ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಕೇವಲ ತನ್ನ ಹೆಸರಿನಲ್ಲಿರುವ ಆಸ್ತಿಯನ್ನಷ್ಟೇ ಘೋಷಣೆ ಮಾಡಿದ್ದಾರೆ. ಹೆಂಡತಿ ಹೆಸರು, ಆಕೆಯ ಹೆಸರಿನಲ್ಲಿರುವ ಆಸ್ತಿಯನ್ನ ಘೋಷಣೆ ಮಾಡಿಲ್ಲವೆಂದು ಆರೋಪಿಸಿದ್ದಾರೆ.
ಸೂರಜ್ ರೇವಣ್ಣ ಅಫಿಡೆವಿಟ್ ನಲ್ಲಿ ಸಲ್ಲಿಸಿರುವಂತೆ ತಮ್ಮ 33 ವಯಸ್ಸಿನಲ್ಲಿಯೇ 65 ಕೋಟಿಗೂ ಹೆಚ್ಚು ಆಸ್ತಿ ಗಳಿಕೆ ಮಾಡಿರುವುದಾಗಿ ಘೋಷಿಸಿದ್ದಾರೆ. 3.53 ಕೋಟಿ ಚರಾಸ್ತಿ, 61.68 ಚರಾಸ್ತಿ ಇರುವುದಾಗಿ ಘೋಷಣೆ ಮಾಡಿದ್ದಾರೆ. ಡಿಸೆಂಬರ್ 10 ರಂದು ಚುನಾವಣೆ ನಡೆಯಲಿದೆ. ಆದ್ರೆ ಈ ಸಮಯದಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿರುವುದೆ. ಈಗ ಚುನಾವಣಾ ಆಯೋಗ ಏನು ಕ್ರಮ ತೆಗೆದುಕೊಳ್ಳುತ್ತೆ ಎಂಬ ಪ್ರಶ್ನೆ ಕಾಡುವಂತಾಗಿದೆ.