ಆರೋಪ ಮುಕ್ತಗೊಳಿಸುವಂತೆ ಸಲ್ಲಿಸಿದ್ದ ಸೂರಜ್ ರೇವಣ್ಣ ಅರ್ಜಿ ವಜಾ : ಮುಂದೇನು..?

1 Min Read

ಬೆಂಗಳೂರು: ಅಸಹಜ ಲೈಂಗಿಕ ಪ್ರಕರಣದಲ್ಲಿ ಜೈಲು ಸೇರಿದ್ದ ಸೂರಜ್ ರೇವಣ್ಣ ಅವರಿಗೆ ಶಾಕ್ ಆಗಿದೆ. ತಮ್ಮ ವಿರುದ್ಧ ಕೇಳಿ ಬಂದಿದ್ದ ಆರೋಪದಿಂದ ಮುಕ್ತಗೊಳಿಸುವಂತೆ ಸೂರಜ್ ರೇವಣ್ಣ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಆ ಅರ್ಜಿಯನ್ನು ತಿರಸ್ಕಾರ ಮಾಡಿದೆ. ಜನಪ್ರತಿನಿಧಿಗಳ ಸೆಷನ್ಸ್ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ. ಇದಕ್ಕೂ ಮುನ್ನ ಆರೋಪ ಮುಕ್ತಗೊಳಿಸುವಂತೆ ಸಲ್ಲಿಸಿದ್ದ ಡಿಶ್ಚಾರ್ಜ್ ಅರ್ಜಿಯನ್ನು 42ನೇ ಎಸಿಜೆಎಂ ಕೋರ್ಟ್ ವಜಾಗೊಳಿಸಿತ್ತು. ಇದನ್ನು ಸೂರಜ್ ರೇವಣ್ಣ ಜನಪ್ರತಿನಿಧಿಗಳ ಸೆಷನ್ಸ್ ಕೋರ್ಟ್ ನಲ್ಲಿ ಪ್ರಶ್ನೆ ಮಾಡಿದ್ದರು. ಇದೀಗ ಇಲ್ಲಿಯೂ ಅರ್ಜಿಯನ್ನ ವಜಾಗೊಳಿಸಿದ್ದು, ಎಸಿಜೆಎಂ ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ.

ಇದರಿಂದ ಸೂರಜ್ ರೇವಣ್ಣರಿಗೆ ನಿರಾಸೆಯಾದಂತೆ ಆಗಿದೆ. 2024ರ ಜೂನ್ ನಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಕೇಸ್ ದಾಖಲಾಗಿತ್ತು. ಸಂತ್ರಸ್ತ ನೀಡಿದ್ದ ದೂರು ಆಧರಿಸಿ, ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ) ಹಾಗೂ 506 (ಬೆದರಿಕೆ)ಯಡಿ ಕೇಸ್ ದಾಖಲಾಗಿತ್ತು. ಸೂರಜ್ ರೇವಣ್ಣ ನನಗೆ ಚುಬಾವಣೆ ಸಂದರ್ಭದಲ್ಲಿ ಪರಿಚಯವಾಗಿದ್ದರು. ನಾನು ಅವರ ತಮ್ಮ ಪ್ರಜ್ವಲ್ ರೇವಣ್ಣ ಪರ ಕೆಲಸ ಮಾಡಿದ್ದೇನೆ. ಆ ಸಂದರ್ಭದಲ್ಲಿ ನನ್ನ ನಂಬರ್ ನ ಸೂರಜ್ ತೆಗೆದುಕೊಂಡಿದ್ದರು. ಜೂ.14 ರಂದು ಸೂರಜ್ ನನಗೆ ಮೆಸೇಜ್ ಮಾಡಿದ್ದರು. ಮೆಸೇಜ್‍ನಲ್ಲಿ ನನ್ನ ಬಗ್ಗೆ ಎಲ್ಲಾ ಮಾಹಿತಿ ಪಡೆದಿದ್ದರು. ನಂತರ ಜೂ.16 ರಂದು ಹೊಳೆನರಸೀಪುರ ತಾಲೂಕಿನ, ಗನ್ನೀಕಡ ತೋಟಕ್ಕೆ ಸಂಜೆ ಬರಲು ಹೇಳಿದ್ದರು ಎಂದು ದೂರು ದಾಖಲಾಗಿತ್ತು.

Share This Article
Enable Notifications OK No thanks