Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಡಿಕೆಶಿ ಸಿಎಂ ಆಗಬಾರದೆಂದು ಡಿಕೆ ಸುರೇಶ್ ಅವರನ್ನು ಸೋಲಿಸಿದ್ದಾರೆ : ಸಿದ್ದರಾಮಯ್ಯ ವಿರುದ್ಧ ಸುರೇಶ್ ಗೌಡ ಆರೋಪ

---Advertisement---

ತುಮಕೂರು: ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕೊಂಚ ಸುಧಾರಿಕೆಯ ಫಲಿತಾಂಶ ಬಂದಿದೆ. ಆದರೆ ಡಿಕೆ ಸುರೇಶ್ ಸೋಲು ಕಂಡಿರುವುದು ಕಾಂಗ್ರೆಸ್ ಗೆ ಶಾಕ್ ಆಗಿದೆ‌. ಗ್ಯಾರಂಟಿ ಯೋಜನೆಗಳ ನಡುವೆಯೂ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಇದೆಲ್ಲವನ್ನು ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದಾರೆ. ಇದರ ನಡುವೆ ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅವರ ಸೋಲಿಗೆ ಸಿದ್ದರಾಮಯ್ಯ ಅಂಡ್ ಟೀಂ ಕಾರಣ. ಡಿಕೆ ಶಿವಕುಮಾರ್ ಸಿಎಂ ಆಗುವುದನ್ನು ತಪ್ಪಿಸಲು ಈ ರೀತಿ ಮಾಡಿದ್ದಾರೆ. ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕೆಂದು ಒಂದು ಅಹಿಂದ ಟೀಂ ಯಾವಾಗಲೂ ಕೆಲಸ ಮಾಡುತ್ತದೆ. ಆ ಅಹಿಂದ ಟೀಂ ಮತ್ತು ಸಿದ್ದರಾಮಯ್ಯ ಟೀಂ ಸೇರಿಕೊಂಡು ಡಿಕೆ ಸುರೇಶ್ ಅವರನ್ನು ಸೋಲಿಸಿದ್ದಾರೆ. ಇದು ಸಿದ್ದರಾಮಯ್ಯ ಅವರ ಸಂಚಿನ ಒಂದು ಭಾಗ ಎಂದಿದ್ದಾರೆ.

ಈ ಮೊದಲೇ ನಾನು ಒಂದು ಮಾತು ಹೇಳಿದ್ದೆ. ಸತೀಶ್ ಜಾರಕಿಹೊಳಿ, ಪರಮೇಶ್ವರ್, ರಾಜಣ್ಣ, ಸಿದ್ದರಾಮಯ್ಯ ಇಷ್ಟು ಜನ ಸೇರಿ ಡಿ.ಕೆ.ಸುರೇಶ್ ಅವರನ್ನು ಸೋಲಿಸುತ್ತಾರೆ ಎಂದು ಚುನಾವಣೆಯ ಮೊದಲೇ ಹೇಳಿದ್ದೆ. ನಾನು ಹೇಳಿದಂತೆಯೇ ನಡೆದಿದೆ. ಎರಡು ಲಕ್ಷ ಮತಗಳ ಅಂತರದಿಂದ ಸೋಲಿಸುತ್ತಾರೆ ಎಂದು ಹೇಳಿದ್ದೆ. ಆದರೆ ಈಗ ಅದಕ್ಕಿಂತ ಹೆಚ್ಚಿನ ಮತಗಳ ಅಂತರದಿಂದ ಸೋಲಿಸಿದ್ದಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬಾರದು, ಅವರ ನೈತಿಕತೆ ಕುಸಿಯಬೇಕು ಅಂತ ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...