ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲೂ ಬಣ ರಾಜಕೀಯ ಹೊರತಾಗಿ ಏನು ಇಲ್ಲ. ಡಿಸಿಎಂ ಡಿಕೆ ಶಿವಕುಮಾರ್ ಪರ ಒಂದಷ್ಟು ಮಂದಿ, ಸಿಎಂ ಸಿದ್ದರಾಮಯ್ಯ ಪರ ಒಂದಷ್ಟು ಮಂದಿ ಆಗಾಗ ಬ್ಯಾಟ್ ಬೀಸುತ್ತಲೆ ಇರುತ್ತಾರೆ. ಈ ಬಣ ರಾಜಕೀಯಕ್ಕೆ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಪಕ್ಷದ ಸಂಘಟನೆ, ಅಧಿಕಾರ ಹಾಗೂ ಸರ್ಕಾರದ ವಿಚಾರವಾಗಿ ಪಕ್ಷದ ಯಾವುದೇ ನಾಯಕರು ಸರ್ಕಾರದ ವಿಚಾರವಾಗಿ ಸಾರ್ವಜನಿಕವಾಗಿ ಮಾತನಾಡುವಂತೆ ಇಲ್ಲ. ಪಕ್ಷದ ಶಿಸ್ತು ಮೀರಿ, ಯಾರೇ ಮಾತನಾಡಿದರು ಕಠಿಣ ಕ್ರಮ ಕೈಗೊಳ್ಳಲಾಗುವುದು. ಪಕ್ಷದ ಶಾಸಕರು ತಮ್ಮ ಜಿಲ್ಲೆಗಳಲ್ಲಿ ಆಗಬೇಕಾದ ಅಭಿವೃದ್ಧಿ, ರಾಜ್ಯದ ಜನರಿಗೆ ಅನುಕೂಲವಾಗುವಂತಹ ನೀತಿಗಳ ಬಗ್ಗೆ ಯೋಚಿಸಿ, ಸಲಹೆ ನೀಡುವತ್ತ ಗಮನಹರಿಸಬೇಕು. ಅಧಿಕಾರ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವಂತೆ ಇಲ್ಲ. ಇದು ಶಿಸ್ತು ಉಲ್ಲಂಘನೆಯಾಗುತ್ತದೆ ಎಂದಿದ್ದಾರೆ.
ನಿಮ್ಮ ಧ್ವನಿಗೆ ಪಕ್ಷದಲ್ಲಿ ಅವಕಾಶವಿದೆ. ನೀವುಗಳು ನಿಮ್ಮ ದೂರು, ಸಲಹೆ, ಅಭಿಪ್ರಾಯಗಳನ್ನು ಮುಖ್ಯಮಂತ್ರಿಗಳು, ಪಕ್ಷದ ಅಧ್ಯಕ್ಷರು ಹಾಗೂ ನನ್ನ ಬಳಿ ಚರ್ಚೆ ಮಾಡಿ. ಅದರ ಹೊರತು ಸಾರ್ವಜನಿಕವಾಗಿ ಅಲ್ಲ ಎಂದಿದ್ದಾರೆ. ಇಂದು ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಚರ್ಚೆಗಳು ನಡೆದಿವೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ರಣದೀಪ್ ಸುರ್ಜೆವಾಲ್, ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಸೇರಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮುಂದಿನ ಲೋಕಸಭಾ ಚುನಾವಣೆಯ ತಯಾರಿ, ಅಭ್ಯರ್ಥಿಗಳ ಆಯ್ಕೆ, ನಿಗಮ ಮಂಡಳಿಗಳ ನೇಮಲ ಹಾಗೂ ಶಾಸಕರ ನೇರವಾದ ಆರೋಪಗಳಿಗೆ ಸಂಬಂಧಿಸಿದಂತೆ ಚರ್ಚೆಗಳು ನಡೆದಿವೆ.