Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್: ದಿನೇಶ್ ಗುಂಡೂರಾವ್ ಮಾಹಿತಿ

---Advertisement---

ಸುದ್ದಿಒನ್,ಬೆಂಗಳೂರು,ಮೇ.27: ರಾಜ್ಯದಲ್ಲಿ ತೀವ್ರ ಆತಂಕ ಮೂಡಿಸಿದ್ದ ಶಂಕಿತ ಎಬೋಲಾ (Ebola Virus) ಪ್ರಕರಣದ ಪ್ರಯೋಗಾಲಯ ತಪಾಸಣಾ ವರದಿ ಬಂದಿದ್ದು, ವರದಿಯಲ್ಲಿ ‘ನೆಗೆಟಿವ್’ ಎಂದು ತಿಳಿದುಬಂದಿದೆ. ಈ ಮೂಲಕ ರಾಜ್ಯದಲ್ಲಿದ್ದ ಎಬೋಲಾ ಭೀತಿ ಸಂಪೂರ್ಣವಾಗಿ ದೂರವಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಶಂಕಿತ ವ್ಯಕ್ತಿಗೆ ಯಾವುದೇ ರೀತಿಯ ಎಬೋಲಾ ಸೋಂಕು ತಗುಲಿಲ್ಲ ಎಂಬುದನ್ನು ಆರೋಗ್ಯ ಇಲಾಖೆಯ ತಜ್ಞ ವೈದ್ಯರು ಖಚಿತಪಡಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಎಬೋಲಾ ಸೋಂಕಿನ ಶಂಕೆ ವ್ಯಕ್ತವಾದ ತಕ್ಷಣವೇ ಆರೋಗ್ಯ ಇಲಾಖೆಯು ಸಾರ್ವಜನಿಕ ಆರೋಗ್ಯ ಮಾರ್ಗಸೂಚಿಗಳ ಅನ್ವಯ ಅತ್ಯಂತ ಕಟ್ಟುನಿಟ್ಟಾದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ವೈದ್ಯಕೀಯ ನಿಯಮಾವಳಿಗಳನ್ನು ಪಾಲಿಸಿದೆ. ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯೇ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಇಲಾಖೆಯು ಪ್ರತಿಯೊಂದು ಪರಿಸ್ಥಿತಿಯನ್ನೂ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಸಾರ್ವಜನಿಕರು ಯಾರೂ ಅನಗತ್ಯವಾಗಿ ಆತಂಕಕ್ಕೊಳಗಾಗಬಾರದು. ವದಂತಿಗಳಿಗೆ ಕಿವಿಗೊಡದೆ, ಇಲಾಖೆ ನಿಗದಿಪಡಿಸಿದ ಆರೋಗ್ಯ ಮಾರ್ಗಸೂಚಿಗಳನ್ನು ಪಾಲಿಸಿ. ಸರ್ಕಾರ ಮತ್ತು ಆರೋಗ್ಯ ಇಲಾಖೆ ಅಧಿಕೃತವಾಗಿ ಹೊರಡಿಸುವ ಮಾಹಿತಿ ಹಾಗೂ ಪ್ರಕಟಣೆಗಳನ್ನು ಮಾತ್ರ ನಂಬಬೇಕು. ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ.ಯಾವುದೇ ರೀತಿಯ ಸವಾಲನ್ನು ಎದುರಿಸಲು ಮತ್ತು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಇಲಾಖೆ ಸಂಪೂರ್ಣವಾಗಿ ಸಜ್ಜಾಗಿದೆ ಎಂದು ಸಚಿವರು ಜನತೆಗೆ ಧೈರ್ಯ ತುಂಬಿದ್ದಾರೆ.

Join WhatsApp

Join Now

Join Telegram

Join Now