ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 30 : ಅನೈತಕ ಸಂಬಂಧ ಹಿನ್ನೆಲೆ ಪತ್ನಿಯ ಮೇಲೆ ಮಚ್ಚಿನಿಂದ ಪಾಪಿ ಪತಿಯೊಬ್ಬ ಮನ ಬಂದಂತೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಮಚ್ಚಿನೇಟಗಿ ಪತ್ನಿ ಮುಖಕ್ಕೆ ತೀವ್ರ ರೀತಿಯ ಗಾಯಗಳಾಗಿದ್ದು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ.
ಹಿರಿಯೂರು ತಾಲೂಕಿನ ಚೆನ್ನಮ್ಮನಹಳ್ಳಿ ತಾಂಡದಲ್ಲಿ ಈ ಘಟನೆ ಜರುಗಿದೆ. ಈ ಘಟನೆಯಲ್ಲಿ ಲಕ್ಷ್ಮಿ (35 )ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾಳೆ .ಆಕೆ ಪತಿ ತಿಪ್ಪೇಸ್ವಾಮಿ ಎಂಬಾತನಿಂದ ಕೃತ್ಯ ನಡೆದಿದೆ. ಕಳೆದ ಮೂರು ತಿಂಗಳಿಂದ ಈತನ ಜೊತೆ ಜಗಳ ಮಾಡಿಕೊಂಡು ತವರು ಮನೆಗೆ ಬಂದು ನೆಲೆಸಿದ್ದಳು ಎನ್ನುವ ಮಾಹಿತಿ ತಿಳಿದು ಬಂದಿದೆ .ಪತ್ನಿ ಲಕ್ಷ್ಮಿ ಮೇಲೆ ಅನೈತಿಕ ಸಂಬಂಧ ಇದೆ ಎಂದು ಅನುಮಾನಪಟ್ಟಿದ್ದ. ಇದೇ ದ್ವೇಷಕ್ಕೆ ಅತ್ತೆ ಮನೆಗೆ ಬಂದು ಪತಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಲಕ್ಷ್ಮಿ ಸ್ಥಿತಿ ಗಂಭೀರವಾಗಿದ್ದು ದಾವಣಗೆರೆ ಆಸ್ಪತ್ರೆಗೆ ಚಿಕಿತ್ಸೆ ಗೆ ದಾಖಲಿಸಲಾಗಿದೆ. ಆರೋಪಿ ತಿಪ್ಪೇಸ್ವಾಮಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











