Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಿಡಿಒ ಅಮಾನತು ಮಾಡಿ : ಕರುನಾಡ ವಿಜಯಸೇನೆ ಆಗ್ರಹ…!

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ.25  : ಹಣ ದುರುಪಯೋಗ, ಕರ್ತವ್ಯದಲ್ಲಿ ಲೋಪವೆಸಗುತ್ತಿರುವ ಭರಮಸಾಗರ ಗ್ರಾಮ ಪಂಚಾಯಿತಿ ಪಿ.ಡಿ.ಓ. ಶ್ರೀಮತಿ ಕೆ.ಎಸ್.ಶ್ರೀದೇವಿ ಇವರನ್ನು ಕೂಡಲೆ ಸೇವೆಯಿಂದ ಅಮಾನತ್ತುಗೊಳಿಸುವಂತೆ ಕರುನಾಡ ವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.

ಪಂಚಾಯಿತಿಯ ಹಣ ದುರುಪಯೋಗಪಡಿಸಿಕೊಂಡು ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡುತ್ತಿರುವ ಪಿ.ಡಿ.ಓ. ಶ್ರೀದೇವಿ ಇ.ಸ್ವತ್ತುಗಳಿಗೆ ರಸೀದಿ ನೀಡದೆ ಹಣವನ್ನು ಗುಳುಂ ಮಾಡುತ್ತಿದ್ದು, ಬೋಗಸ್ ಬಿಲ್ಲುಗಳ ಮೂಲಕ ಹಣ ಲೂಟಿ ಹೊಡೆಯುತ್ತಿದ್ದಾರೆಂದು ಪ್ರತಿಭಟನಾಕಾರರು ದೂರಿದರು.

ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಗ್ರಾಮ ಪಂಚಾಯಿತಿಯಲ್ಲಿಯೂ ಇದೆ ರೀತಿ ಹಣ ದುರುಪಯೋಗಪಡಿಸಿಕೊಂಡಿರುವ ಪಿ.ಡಿ.ಓ. ಕೆ.ಎಸ್.ಶ್ರೀದೇವಿ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರನ್ನು ಅಗೌರವದಿಂದ ನಡೆಸಿಕೊಳ್ಳುತ್ತಿದ್ದಾರೆಂಬ ಆರೋಪಗಳು ಕೇಳಿ ಬರುತ್ತಿವೆ. ಇಷ್ಟಾದರೂ ಇನ್ನು ಇವರ ಮೇಲೆ ಯಾವ ಕ್ರಮ ಕೈಗೊಳ್ಳದಿರುವುದರ ಹಿಂದಿರುವ ಉದ್ದೇಶವೇನು? ಎಂದು ಪ್ರಶ್ನಿಸಿದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ತಕ್ಷಣವೇ ಸೇವೆಯಿಂದ ಅಮಾನತ್ತುಗೊಳಿಸದಿದ್ದರೆ ಇದೇ ತಿಂಗಳ 29 ರಂದು ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಸಿದರು.

ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಉಪಾಧ್ಯಕ್ಷರುಗಳಾದ ರತ್ನಮ್ಮ, ಮುಜಾಹಿದ್,  ರಾಜ್ಯ ಸಮಿತಿ ಸದಸ್ಯ ನಿಸಾರ್ ಅಹಮದ್, ಅವಿನಾಶ್, ಸುರೇಶ್, ಪಿ.ಆರ್.ಹರೀಶ್‌ಕುಮಾರ್, ಸಿ.ಜಗದೀಶ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...