Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಯವರಿಂದ ಸ್ವಚ್ಛತಾ ಕಾರ್ಯಕ್ರಮ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.01  : ದೇಶದ ಪ್ರಧಾನಿ ನರೇಂದ್ರಮೋದಿರವರ ಹುಟ್ಟುಹಬ್ಬದ ಅಂಗವಾಗಿ ನಡೆದ ಸೇವಾ ಪಾಕ್ಷಿಕ ಕಾರ್ಯಕ್ರಮದಡಿ ಬಿಜೆಪಿ ನಗರ ಘಟಕದಿಂದ ಭಾನುವಾರ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

35 ನೇ ವಾರ್ಡಿನ ಐ.ಯು.ಡಿ.ಪಿ. ಬಡಾವಣೆಯಲ್ಲಿರುವ ಗಣಪತಿ ದೇವಸ್ಥಾನದ ಉದ್ಯಾನವನದಲ್ಲಿ ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ ಪ್ರಧಾನಿ ನರೇಂದ್ರಮೋದಿರವರು ಸ್ವಚ್ಚ ಅಭಿಯಾನಕ್ಕೆ ಚಾಲನೆ ನೀಡಿರುವುದರಿಂದ ಅವರ ಜನ್ಮದಿನದ ಪ್ರಯುಕ್ತ ಸೇವಾಪಾಕ್ಷಿಕ ಅಡಿ ರಕ್ತದಾನ ಶಿಬಿರ, ಗಿಡನೆಡುವುದು, ಉಚಿತ ಆರೋಗ್ಯ ತಪಾಸಣೆ ಹೀಗೆ ಹತ್ತು ಹಲವಾರು ಕಾರ್ಯಕ್ರಮಗಳನ್ನು ನಗರದ 35 ವಾರ್ಡ್‍ಗಳಲ್ಲಿಯೂ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ನಗರಾಧ್ಯಕ್ಷ ನವೀನ್ ಚಾಲುಕ್ಯ, ಜಿಲ್ಲಾ ಉಪಾಧ್ಯಕ್ಷ ಸಂಪತ್‍ಕುಮಾರ್, ಶ್ಯಾಮಣ್ಣ, ಶಿವಪ್ರಕಾಶ್, ಮಾಧುರಿ ಗಿರೀಶ್, ನಾಗರಾಜ್‍ಬೇದ್ರೆ, ನಗರಸಭೆ ಸದಸ್ಯರುಗಳಾದ ಶ್ರೀನಿವಾಸ್, ಹರೀಶ್, ಬಿಜೆಪಿ. ಮುಖಂಡರುಗಳಾದ ತಿಮ್ಮಣ್ಣ, ರವಿಕುಮಾರ್, ರಮೇಶ್‍ಆಚಾರ್, ಬಸಮ್ಮ, ಚಂದ್ರು, ರಾಮು, ಅರುಣಕುಮಾರಿ, ಕಿರಣ್, ಶಂಭು ಇನ್ನು ಮುಂತಾದವರು ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment