ಸುದ್ದಿಒನ್, ಚಿತ್ರದುರ್ಗ, ಸೆ.30 : ನಗರದ ಹೊರವಲಯದ ಕವಾಡಿಗರಹಟ್ಟಿ ಬಳಿಯ ದವಳಿ ಹೊಂಡದಲ್ಲಿ ಶನಿವಾರ ನಗರಸಭೆ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ ಹಮ್ಮಿಕೊಳ್ಳಲಾಯಿತು.
ಪುರಾತನ ಕಾಲದ ಪುಷ್ಕರಣಿಯಲ್ಲಿ
ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಅಭಿಯಾನ ಕಾರ್ಯರೂಪಕ್ಕೆ ತರಲಾಯಿತು. ಇದಕ್ಕೂ ಮೊದಲು ಸ್ವಚ್ಛತೆಯ ಬಗ್ಗೆ ಪೌರಾಯುಕ್ತರಾದ ಶ್ರೀಮತಿ ಎಂ. ರೇಣುಕಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ತಿಳುವಳಿಕೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಜಯಪ್ಪ, ಆರೋಗ್ಯ ನಿರೀಕ್ಷಕರಾದ ನಾಗರಾಜ್, ನೈರ್ಮಲ್ಯ ಮೇಲ್ವಿಚಾರಕರಾದ ರವಿಚಂದ್ರು, ನಗರಸಭೆ ಸಿಬ್ಬಂದಿಗಳು, ಪೌರ ಕಾರ್ಮಿಕರು ಹಾಗೂ ಪ್ರಿಯದರ್ಶಿನಿ ಪ್ರೌಢಶಾಲೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











