ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರಿನ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಕುದೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮಠದ ಜಮೀನು ವಿಚಾರಕ್ಕೆ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಮಠ ಇತಿಹಾಸ ಪ್ರಸಿದ್ಧವಾಗಿದೆ. ಇದೀಗ ಸ್ವಾಮೀಜಿಗಳ ಸಾವು ನಿಗೂಢವಾಗಿದ್ದು, ಆತಂಕ ಸೃಷ್ಟಿಯಾಗಿದೆ.
ಸ್ವಾಮೀಜಿಗಳು ನಿನ್ನೆ ರಾತ್ರಿ ಮಠದ ಕೊಠಡಿಗೆ ತೆರಳಿದ್ದರು. ಆದರೆ ಬೆಳಗ್ಗೆ ಎದ್ದ ಕೂಡಲೇ ಹೊರಗೆ ಬರುತ್ತಿದ್ದವರು, ಇಂದು ಬಂದಿರಲಿಲ್ಲ. ಮಠದೊಳಗೆ ಬಾಗಿಲು ತೆಗೆದು ನೋಡಿದಾಗ ವಿಚಾರ ಬೆಳಕಿಗೆ ಬಂದಿದೆ. ಕೂಡಲೇ ಮಠದ ಸಿಬ್ಬಂದಿಗಳು ಗಾಬರಿಯಾಗಿದ್ದು, ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ.