Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಘಕ್ಕೆ ರಾಜಕೀಯದವರಿಗಿಂತ ಸ್ವಾಮೀಜಿಗಳೇ ಹೆಚ್ಚು ಹತ್ತಿರ : ಡಾ.ಮೋಹನ್ ಭಾಗವತ್

Facebook
Twitter
Telegram
WhatsApp

ವರದಿ ಮತ್ತು ಫೋಟೋ : ಸುರೇಶ್ ಪಟ್ಟಣ್‌

ಚಿತ್ರದುರ್ಗ(ಜು.12) :  ಭಾರತ ಭಾರತವಾಗಿ ಉಳಿಯಬೇಕಾದರೆ, ನಾವು ನಾವಾಗಿ ಉಳಿಯಬೇಕು. ಇಲ್ಲದಿದ್ದರೆ ಭಾರತ ಭಾರತವಾಗಿ ಉಳಿಯುವುದಿಲ್ಲ. ಹಾಗಾಗಿ ಧರ್ಮವು ಎಲ್ಲಕಡೆ ಓತಪ್ರೋತವಾಗಿ ಇರುವಂತೆ ಆಗಬೇಕು. ಮತಾಂತರ ಆಗುವುದರಿಂದ ನಮ್ಮಲ್ಲಿ ಪ್ರತ್ಯೇಕತೆಯನ್ನು ತರುತ್ತದೆ. ಮೂಲದಿಂದ ಬೇರಿನಿಂದ ಮತಾಂತರ ಆದವರು ದೂರ ಉಳಿಯುವಂತೆ ಮಾಡುತ್ತದೆ. ಹಾಗಾಗಿ ನಾವು ಮತಾಂತರವನ್ನು ತಡೆಯುವ ಪ್ರಯತ್ನ ಮಾಡಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಡಾ.ಮೋಹನ್ ಭಾಗವತ್ ತಿಳಿಸಿದರು.

ಶ್ರೀ ಶಿವಶರಣ ಮಾದಾರಚನ್ನಯ್ಯ ಗುರುಪೀಠದಲ್ಲಿ ದಲಿತ, ಹಿಂದುಳಿದ ವರ್ಗಗಳ 21 ಮಠಾಧೀಶರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾತನಾಡಿ ನಮ್ಮ ಸಮಾಜದಲ್ಲಿ ಕೆಲವು ಭಾಗ ಹಿಂದುಳಿಯಿತು. ಏಕೆಂದರೆ ಸಂಪರ್ಕ ಮುರಿದು ಹೋಯಿತು. ಹಿಂದು ಸಮಾಜದ ಎಲ್ಲಾ ಅಂಗಗಳನ್ನು ಸುಸ್ಥಿತಿಯಲ್ಲಿಡುವುದು ಕರ್ತವ್ಯ. ಮತ್ತೆ ಮತ್ತೆ ಸೇರುವುದರಿಂದ ಇದು ಸರಿ ಆಗುತ್ತದೆ. ಇದನ್ನೇ ಸಮರಸತೆ ಎನ್ನುವರು. ಸಂಘ ಇದೇ ಪ್ರಯತ್ನ ಮಾಡುತ್ತಿದೆ. ಸಮಾಜದ ಎಲ್ಲಾ ಅಂಗಗಳ ಬಗ್ಗೆ ಸಂವೇದನೆ ಇರಬೇಕು. ಪರಸ್ಪರ ಆಗಾಗ ಸೇರುವುದರಿಂದ ನಮಗೆ ಪರಸ್ಪರರ ಬಗ್ಗೆ ಅರಿವು ಹೆಚ್ಚಾಗುತ್ತದೆ. ಅರಿವು ಹೆಚ್ಚಾದಾಗ ಸಂಶಯಗಳು, ಅಪನಂಬಿಕೆಗಳು ದೂರ ಆಗುತ್ತವೆ. ಆಗ ಮನಸ್ಸುಗಳು ಒಂದಾಗುತ್ತವೆ. ರಾ.ಸ್ವ.ಸಂಘ ಮತ್ತು ಮಠಗಳು ಹಾಗೂ ಸ್ವಾಮೀಜಿಗಳೂ ಪರಸ್ಪರ ಮತ್ತೆ ಮತ್ತೆ ಭೇಟಿ ಮಾಡುತ್ತಿರಬೇಕು ಎಂದರು.

ಸಂಘಕ್ಕೆ ಹೆಚ್ಚು ಹೊಂದುವುದು ರಾಜಕೀಯ ಅಲ್ಲ. ಧಾರ್ಮಿಕತೆ ಮತ್ತು ಆಧ್ಯಾತ್ಮಿಕತೆ. ಹಾಗಾಗಿ ನಮಗೆ ಸಂಘಕ್ಕೆ ರಾಜಕೀಯದವರಿಗಿಂತ ಸ್ವಾಮೀಜಿಗಳೇ ಹೆಚ್ಚು ಹತ್ತಿರವಾಗುತ್ತಾರೆ. ಹಿಂದೂ ಸಮಾಜದ ಪ್ರಮುಖ ಸಮಸ್ಯೆಗಳಾದ ಅಸ್ಪೃಶ್ಯತೆ, ವಿಷಮತೆ, ಅಸಮಾನತೆ ಇವುಗಳು ಮುಖ್ಯವಾಗಿ ಇರುವುದು ನಮ್ಮ ಮನಸ್ಸಿನಲ್ಲಿ. ಶಾಸ್ತ್ರಗಳಲ್ಲಿ ಸಮಸ್ಯೆ ಇಲ್ಲ. ಮತ್ತು ಈ ಸಮಸ್ಯೆಗಳು ಹಲವಾರು ಶತಮಾನಗಳಿಂದ ನಮ್ಮ ಮನಸ್ಸಿನಲ್ಲಿ ಉಳಿದಿವೆ. ಹಾಗಾಗಿ ಇದರ ಪರಿಹಾರಕ್ಕೂ ಸಮಯ ತಗುಲುವುದು. ನಿಧಾನವಾಗಿ ಇದನ್ನು ಮನಸ್ಸಿನಿಂದ ತೆಗೆಯುವ ಕೆಲಸವಾಗಬೇಕಿದೆ. ಅಲ್ಲಿಯವರೆಗೂ ಸಹನೆ ಮತ್ತು ಧೈರ್ಯವನ್ನು ನಾವು ಹೊಂದಬೇಕು. ಅದು ಆಗೇ ಆಗುತ್ತದೆ. ಮತ್ತು ಆ ಕಾರ್ಯದಲ್ಲಿ ನಾವು ನಿರತರಾಗಿದ್ದೇವೆ ಎಂದು ಮೋಹನ್ ಭಾಗವತ್ ತಿಳಿಸಿದರು.

ಸಂಸ್ಕಾರದ ಬಗ್ಗೆಯೂ ಗಮನಹರಿಸಬೇಕಿದೆ. ದೊಡ್ಡವರಿಗೆ ಗೌರವಕೊಡುವುದು, ನಮ್ಮ ಮಾತೆಯರು ಸೋದರಿಯಲ್ಲಿ ಹೇಗೆ ನಡೆದುಕೊಳ್ಳಬೇಕು? ಇವುಗಳನ್ನು ನಮ್ಮ ಸಮಾಜದ ನವ ಪೀಳಿಗೆಗಳಿಗೆ ಹೇಳಿಕೊಡಬೇಕಿದೆ. ಆಧುನಿಕ ವಿದ್ಯಾಭ್ಯಾಸದೊಂದಿಗೆ ಶಿಕ್ಷಣ ಸಿಗುತ್ತಿದೆ, ಆದರೆ ಸಂಸ್ಕಾರ ಸ್ವಲ್ಪ ದೂರ ಆಗುತ್ತಿದೆ. ಸಂಸ್ಕಾರ, ನಿಷ್ಠೆ ದೃಢವಾಗಬೇಕು ಎಂದರೆ ಏನಾದರೂ ಒಂದು ರೀತಿಯ ಉಪಾಸನೆಯನ್ನು ಜೋಡಿಸಿಕೊಳ್ಳಬೇಕು. ನೀವು, ಸ್ವಾಮೀಜಿಗಳು. ಸಾಧನೆ, ನಿಯಮಿತ ತಪಸ್ಸನ್ನು ನೀವು ಮಾಡುವವರು. ನಿಮ್ಮ ಜೀವನದ ಕಾರಣಕ್ಕಾಗಿ ನೀವು ಇದನ್ನು ಕೊಡಲು ಅಧಿಕಾರಿಗಳು. ನೀವು ಸಮಾಜವನ್ನು ಸಂಸ್ಕಾರವಂತ ಸಮಾಜವನ್ನಾಗಿ ಎಬ್ಬಿಸಿ ನಿಲ್ಲಿಸಬೇಕು. ಎಲ್ಲರೂ ಒಟ್ಟಾಗಿ ಮುನ್ನಡೆಯಬಹುದು. ಮುನ್ನಡೆಯಬೇಕು. ಸೇವೆ ಮತ್ತು ಸಂಸ್ಕಾರದ ಮೂಲಕ ನಾವು ಸಮಾಜವನ್ನು ಕಟ್ಟಿಬೆಳೆಸಬೇಕಿದೆ. ಸತ್ಯದ ಸಾಧನೆ ಮಾಡುತ್ತಾ ಸರ್ವರ ಸೇವೆ ಮಾಡಬೇಕಿದೆ ಎಂದರು.

ಇಂದು ನೀವೆಲ್ಲಾ ಮಠಾಧೀಶರು ಮಾಡುತ್ತಿರುವ ಪ್ರಯತ್ನ ಬೀಜರೂಪದಲ್ಲಿದೆ. ಇದು ಖಂಡಿತವಾಗಿ ಹೆಮ್ಮರವಾಗಿ ಬೆಳೆಯುತ್ತದೆ. ಫಲವನ್ನೂ ನೆರಳನ್ನೂ ನೀಡುತ್ತದೆ. ಮಾತ್ರವಲ್ಲ ಸಾವಿರಾರು ಬೀಜಗಳನ್ನು ಸೃಷ್ಟಿಸಿ ಅವೂ ಭೂಮಿಗೆ ತಾಗಿ ಸಸಿಗಳಾಗಿ ಬೆಳೆದು ಹೆಮ್ಮರವಾಗಿ ನಿಂತು ಫಲಗಳನ್ನೂ ನೀಡುವಂತೆ ಖಂಡಿತವಾಗಿ ಬೆಳೆದೇ ಬೆಳಯುತ್ತವೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ನಿಮ್ಮ ಜೊತೆ ಇದೆ. ಏನೇಬರಲಿ, ಸಂಘ ನಿಮ್ಮ ಜೊತೆ ಇದೆ. ನಮ್ಮದೇ ಒಂದು ಶೈಲಿ ಇದೆ. ಆ ಶೈಲಿಯಲ್ಲೇ ನಾವು ಮಾಡುತ್ತೇವೆ. ಸಂಘದ ರೀತಿ ಅತ್ಯಂತ ಪ್ರಾಕೃತಿಕವಾಗಿದ್ದು. ಸಂಘದ ಗತಿ ನಿಧಾನ ಗತಿ. ನಿಧಾನವಾಗಿ ಹೋದರೆ ದೂರಸಾಗಬಹುದು. ನಿಮ್ಮ ಜೊತೆ ಇದ್ದೇವೆ. ನಿಮ್ಮ ಜೊತೆ ಇರುತ್ತೇವೆ. ನಾವು ದೊಡ್ಡವರು ಎಂಬ ಕಾರಣಕ್ಕಾಗಿ ಅಲ್ಲ. ಬದಲಾಗಿ ಇದು ನಮ್ಮ ಕರ್ತವ್ಯ, ಹಾಗಾಗಿ. ನೀವು ಸಂಘವನ್ನು ತಿಳಿದುಕೊಳ್ಳುವ ಪ್ರಯತ್ನವನ್ನು ಮಾಡಿ. ನಾವೆಲ್ಲರೂ ಹಿಂದು ಸಮಾಜದ ಅವಿಭಾಜ್ಯ ಅಂಗ ಎಂದು ಹೇಳಿದರು. ನಂತರ ನಡೆದ ಸಂವಾದದಲ್ಲಿ ಅನೇಕ ಸ್ವಾಮೀಜಿಯವರು ಕೇಳಿದ ಹಲವಾರು ಪ್ರಶ್ನೆಗಳಿಗೆ ಉತ್ತರ ಕೊಟ್ಟರು.

ಕಾರ್ಯಕ್ರಮದಲ್ಲಿ ಜಗದ್ಗುರು ಡಾ. ಶ್ರೀ ಶಾಂತವೀರ ಮಹಾಸ್ವಾಮೀಜಿ, ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮೀಜಿ,  ಜಗದ್ಗುರು ಶ್ರೀ ಡಾ.ಪುರುಷೋತ್ತಮಾನಂದ ಸ್ವಾಮೀಜಿ, ಜಗದ್ಗುರು ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ, ಜಗದ್ಗುರು ಶ್ರೀ ಬಸವ ಮಾಚಿದೇವ ಮಹಾಸ್ವಾಮೀಜಿ, ಶ್ರೀ ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮೀಜಿ, ಶ್ರೀ ಬಸವಕುಂಬಾರ ಗುಂಡಯ್ಯ ಸ್ವಾಮೀಜಿ, ಜಗದ್ಗುರು ಶ್ರೀ ರೇಣುಕಾನಂದ ಮಹಾಸ್ವಾಮೀಜಿ, ಜಗದ್ಗುರು ಶ್ರೀ ವೇಮನಾನಂದ ಮಹಾಸ್ವಾಮೀಜಿ, ಜಗದ್ಗುರು ಶ್ರೀ ಶಾಂತಭೀಷ್ಮ ಅಂಬಿಗರ ಚೌಡಯ್ಯ ಮಹಾಸ್ವಾಮೀಜಿ, ಜಗದ್ಗುರು ಶ್ರೀ ಬಸವ ಭೃಂಗೀಶ್ವರ ಮಹಾಸ್ವಾಮೀಜಿ, ಜಗದ್ಗುರು ಡಾ. ಶ್ರೀ ಬಸವಕುಮಾರ ಮಹಾಸ್ವಾಮೀಜಿ, ಜಗದ್ಗುರು ಶ್ರೀ ದಯಾನಂದಪುರಿ ಮಹಾಸ್ವಾಮೀಜಿ, ಜಗದ್ಗುರು ಶ್ರೀ ಇಮ್ಮಡಿ ಕೇತೇಶ್ವರ ಮಹಾಸ್ವಾಮೀಜಿ, ಜಗದ್ಗುರು ಶ್ರೀ ಬಸವ ನಾಗೀದೇವ ಮಹಾಸ್ವಾಮೀಜಿ, ಶ್ರೀ ಜ್ಞಾನಾನಂದ ಪುರಿ ಮಹಾಸ್ವಾಮೀಜಿ, ಶ್ರೀ ಮಾತಾ ಬಿಸ್ಠದೇವಿಯವರು, ಬಸವ ಅರಳಯ್ಯ ಸ್ವಾಮೀಜಿ, ಶ್ರೀ ಪೂರ್ಣಾನಂದ ಭಾರತೀ ಸ್ವಾಮೀಜಿ, ಶ್ರೀ ಶ್ರೀಧರಾನಂದ ಸ್ವಾಮೀಜಿ ಆದಿಯಾಗಿ ದಲಿತ, ಹಿಂದುಳಿದ ವರ್ಗಗಳ 21 ವಿವಿಧ ಮಠಾಧೀಶರು, ಪೂಜ್ಯರು ಭಾಗವಹಿಸಿದ್ದರು. ಇದರ ನೇತೃತ್ವ ವಹಿಸಿದ್ದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸ್ವಾಗತಿಸಿದರು.

ಆರೆಸ್ಸೆಸ್ನ ಸಹಸರಕಾರ್ಯವಾಹರಾದ ಮುಕುಂದ, ಕ್ಷೇತ್ರೀಯ ಪ್ರಚಾರಕರಾದ ಸುಧೀರ, ಕ್ಷೇತ್ರೀಯ ಕಾರ್ಯವಾಹರಾದ ನಾ.ತಿಪ್ಪೇಸ್ವಾಮಿ, ಪಟ್ಟಾಭಿರಾಮ, ಗುರುಪ್ರಸಾದ, ನಂದೀಶ, ಸಾಮರಸ್ಯ ವೇದಿಕೆಯ ವಾದಿರಾಜ, ವಿ.ಹಿಂ.ಪರಿಷತ್ ನ ಬಸವರಾಜ ಸಂವಾದ ಸಭೆಯಲ್ಲಿದ್ದರು. ರವಿ ಮಲ್ಲಾಪುರ ವಂದಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾ. ತಿಪ್ಪೇಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!