ಶಿವಮೊಗ್ಗ: ಜಿಲ್ಲೆಯಲ್ಲಿ ಕೊಲೆಯಾದ ಭಜರಂಗದಳ ಕಾರ್ಯಕರ್ತ ಹರ್ಷನ ಮನೆಗೆ ಇದೀಗ ಸ್ವಾಮೀಜಿಗಳು ಭೇಟಿ ನೀಡಿ, ಸಾಂತ್ವನ ಹೇಳಿದ್ದಾರೆ. 10ಕ್ಕೂ ಹೆಚ್ಚು ಮಂದಿ ಮಠಾಧೀಶರು ಭೇಟಿ ನೀಡಿ, ಸಮಾಧಾನ ಹೇಳಿದ್ದಾರೆ. ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘ ಶರಣರ ನೇತೃತ್ವದಲ್ಲಿ ಭೇಟಿ ನೀಡಿದ್ದಾರೆ.
ಸಂತರ ನಡೆ ಯಾವಾಗಲೂ ಸಾಂತ್ವನದ ಕಡೆಗೆ ಇರುತ್ತೆ. ಹಿಂಸಾತ್ಮಕ ಸಂಘರ್ಷ ನಡೆಯಬಾರದು. ಹಿಂಸಾತ್ಮಕ ಸಂಘರ್ಷಕ್ಕೆ ಅವರನ್ನ ಕಳೆದುಕೊಂಡಿದ್ದೇವೆ. ಆರ್ಥಿಕ ಆಶೀರ್ವಾದವನ್ನೂ ಮಾಡಿದ್ದೇವೆ. ಸಮಕಾಲಿನ ಸಂತರ ನಡೆ ಶಾಂತಿ, ಸಾಮಾಜಿಕ ಸಂತ್ವಾನದ ಕಡೆ, ಹಾಗಾಗಿ 12ಕ್ಕೂ ಹೆಚ್ಚು ಶ್ರೀಗಳು ಬಂದಿದ್ದೇವೆ. ಇದು ನಮ್ಮ ಆದ್ಯ ಕರ್ತವ್ಯ ಕೂಡ ಎಂದು ಡಾ.ಶಿವಮೂರ್ತಿ ಮುರುಘಾ ಶರಣ ಶ್ರೀಗಳು ಹೇಳಿದ್ದಾರೆ.
ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಭಗೀರಥ ಗುರುಪೀಠದ ಡಾ.ಪುರುಷೋತ್ತಮಾನಂದ ಪುರಿ ಸ್ವಾಮೀಜಿ, ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಡಾ.ಶಾಂತವೀರ ಸ್ವಾಮೀಜಿ, ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಮಡಿವಾಳ ಗುರುಪೀಠದ ಡಾ.ಬಸವ ಮಾಚಿದೇವ ಸ್ವಾಮೀಜಿ, ಅಂಬಿಗರ ಗುರುಪೀಠದ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ, ಹಡಪದ ಗುರುಪೀಠದ ಶ್ರೀ ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮೀಜಿ, ಶಿವಮೊಗ್ಗ ಬಸವಕೇಂದ್ರದ ಡಾ ಬಸವ ಮರುಳಸಿದ್ಧ ಸ್ವಾಮೀಜಿ, ಶಿಕಾರಿಪುರ ವಿರಕ್ತಮಠದ ಶ್ರೀ ಚನ್ನಬಸವ ಸ್ವಾಮೀಜಿ, ದಾವಣಗೆರೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ, ಕೊರಟಗೆರೆಯ ಶ್ರೀ ಮಹಾಲಿಂಗ ಸ್ವಾಮೀಜಿಗಳು ಭೇಟಿ ನೀಡಿದ್ದರು.