ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ.20 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶಿಕ್ಷಕರು ಹಾಗೂ ಪದವೀಧರ ವಿಭಾಗದ ರಾಜ್ಯಾಧ್ಯಕ್ಷ ಡಾ.ಆರ್.ಎಂ.ಕುಬೇರಪ್ಪನವರ ಆದೇಶದಂತೆ ಜಿಲ್ಲಾ ಕಾಂಗ್ರೆಸ್ ಪದವೀಧರ ವಿಭಾಗದ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಶಿಕ್ಷಣ ಇಲಾಖೆ ನಿವೃತ್ತ ಅಧಿಕಾರಿ ಸೈಯದ್ ಅಫಾಖ್ ಅಹಮದ್‍ರವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಪಕ್ಷದ ಕಚೇರಿಯಲ್ಲಿ ಶನಿವಾರ ನೇಮಕಾತಿ ಪತ್ರ ನೀಡಿದರು.
ಸೈಯದ್ ಅಫಾಖ್ ಅಹಮದ್‍ಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಪಕ್ಷದಲ್ಲಿ ಯಾವುದೇ ಹುದ್ದೆ ಪಡೆದುಕೊಂಡು ಸುಮ್ಮನೆ ಕುಳಿತುಕೊಂಡರೆ ಪ್ರಯೋಜನವಿಲ್ಲ. ಜಿಲ್ಲೆಯಾದ್ಯಂತ ಸಂಚರಿಸಿ ಪದವೀಧರ ವಿಭಾಗವನ್ನು ಸಂಘಟಿಸಬೇಕು. ಶಿಕ್ಷಕರ ಕ್ಷೇತ್ರದ ಚುನಾವಣೆ ಎದುರಾಗಲಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರುಗಳನ್ನು ನೊಂದಾಯಿಸುವ ಕೆಲಸವಾಗಬೇಕೆಂದು ಸೂಚಿಸಿದರು.
ಜಿಲ್ಲಾ ಕಾಂಗ್ರೆಸ್ ಪದವೀಧರ ವಿಭಾಗದ ಜಿಲ್ಲಾಧ್ಯಕ್ಷ ಮುದಸಿರ್‍ನವಾಜ್, ಸಿದ್ದಲಿಂಗರಾಜು, ಅಕ್ಬರ್, ವಿಜಯಕುಮಾರ್ ಈ ಸಂದರ್ಭದಲ್ಲಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












