Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಬ್ಲಾಕ್ ಕಾಂಗ್ರೆಸ್ ಸಮಿತಿಯ ಗ್ರಾಮಾಂತರ ಉಪಾಧ್ಯಕ್ಷರಾಗಿ ಟಿ.ಆಲಿಜಾನ್ ನೇಮಕ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಅ.30 : ಚಿತ್ರದುರ್ಗ ಬ್ಲಾಕ್ ಕಾಂಗ್ರೆಸ್ ಸಮಿತಿಯ ಗ್ರಾಮಾಂತರ ಉಪಾಧ್ಯಕ್ಷರಾಗಿ ಚಿತ್ರದುರ್ಗ ತಾಲ್ಲೂಕಿನ ಚಿಕ್ಕಪುರ ಅಂಚೆಯ ನೀಲಯ್ಯನಹಟ್ಟಿ ಗ್ರಾಮದ ಟಿ.ಆಲಿಜಾನ್ ರವರನ್ನು ನೇಮಕ ಮಾಡಿ ಚಿತ್ರದುರ್ಗ ತಾಲ್ಲೂಕು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಆರ್.ಪ್ರಕಾಶ್ ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಆದೇಶ ಪತ್ರವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಪ್ರಕಾಶ್ ಮುಂದಿನ ದಿನಮಾನದಲ್ಲಿ ವಿವಿಧ ರೀತಿಯ ಚುನಾವಣೆಗಳು ಬರುತ್ತವೆ ಇದರಿಂದ ಪಕ್ಷವನ್ನು ಸಂಘಟನೆ ಮಾಡಬೇಕಿದೆ, ಬರೀ ಆದೇಶ ಪತ್ರವನ್ನು ಮನೆಯಲ್ಲಿ ಇಟ್ಟು ಸುಮ್ಮನಾಗದೆ ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿ ಸಂಚಾರ ಮಾಡುವುದರ ಮೂಲಕ ಪಕ್ಷವನ್ನು ಸಂಘಟನೆಯನ್ನು ಮಾಡಿ, ಪಕ್ಷಕ್ಕೆ ನಿಷ್ಠೆ, ಪ್ರಮಾಣಿಕತೆಯಿಂದ ಸೇವೆಯನ್ನು ಸಲ್ಲಿಸಿ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜನ ಖರ್ಗೆಯವರ ಕೈಯನ್ನು ಬಲ ಪಡಿಸಬೇಕಿದೆ ಪಕ್ಷ ನೀತಿ ನಿಯಮಗಳಿಗೆ ಬದ್ದರಾಗಿ ನಡೆಯುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಮಧುಗೌಡ, ಪೈಲೆಟ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...