ಬೆಂಗಳೂರು, (ಡಿ.17) : ಅಂಧರ ಟಿ20 ವಿಶ್ವಕಪ್ ಭಾರತ ಅಂಧರ ಕ್ರಿಕೆಟ್ ತಂಡ ಸತತ ಮೂರು ಬಾರಿ ಟಿ20 ವಿಶ್ವಕಪ್ ಪ್ರಶಸ್ತಿ ಗೆದ್ದುಕೊಂಡಿದೆ.
2022 ರ ಅಂಧರ T20 ವಿಶ್ವಕಪ್‌ನ ಫೈನಲ್‌ನಲ್ಲಿ ಬಾಂಗ್ಲಾದೇಶವನ್ನು 120 ರನ್‌ಗಳಿಂದ ಸೋಲಿಸಿದ ಭಾರತ ಇತಿಹಾಸವನ್ನು ಸೃಷ್ಟಿಸಿತು. ಮೂರನೇ ಬಾರಿಗೆ ಟ್ರೋಫಿಯನ್ನು ಗೆಲ್ಲುವ ಮೂಲಕ, ಅವರು ಅಂಧರ T20 ವಿಶ್ವಕಪ್‌ನ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡವಾಯಿತು. ನಾಯಕ ಅಜಯ್ ರೆಡ್ಡಿ ತಂಡ ಈ ಸಾಧನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
That’s 3rd #T20WorldCup for India 🇮🇳 in blind cricket 🏏
HISTORY 🔺
— Doordarshan Sports (@ddsportschannel) December 17, 2022
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು (ಡಿಸೆಂಬರ್ 17) ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶವನ್ನು 120 ರನ್ ಗಳಿಂದ ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತು. ಹಾಲಿ ಚಾಂಪಿಯನ್ ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು.
ಸುನಿಲ್ ರಮೇಶ್ (63 ಎಸೆತಗಳಲ್ಲಿ 136) ಮತ್ತು ಅರ್ಜುನ್ ಕುಮಾರ್ ರೆಡ್ಡಿ (50 ಎಸೆತಗಳಲ್ಲಿ ಔಟಾಗದೆ 100) ಶತಕಗಳ ಸಂಭ್ರಮದಿಂದ ಭಾರತ ನಿಗಧಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 277 ರನ್ ಗಳ ಬೃಹತ್ ಮೊತ್ತ ಗಳಿಸಿತು. ಬಳಿಕ 278 ರನ್ ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 157 ರನ್ ಮಾತ್ರ ಗಳಿಸಿ ಸೋಲನುಭವಿಸಿತು.
ಭಾರತ ಸತತ ಮೂರನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. 2012ರಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು ನಿಬ್ಬೆರಗಾಗಿಸಿದ್ದು ಇದೇ ಮಾದರಿಯಲ್ಲಿ ಮೊದಲ ಬಾರಿಗೆ ಚಾಂಪಿಯನ್ ಆಗಿತ್ತು. ನಂತರ 2017ರಲ್ಲಿ ನಡೆದ ಎರಡನೇ ಆವೃತ್ತಿಯಲ್ಲಿ ಭಾರತ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಎರಡನೇ ಬಾರಿಗೆ ಚಾಂಪಿಯನ್ ಆಗಿತ್ತು.
ಇಂದು ನಡೆದ ಟೂರ್ನಮೆಂಟ್ ಅನ್ನು ಗೆಲ್ಲುವ ಮೂಲಕ ಭಾರತ ಹ್ಯಾಟ್ರಿಕ್ ವಿಶ್ವಕಪ್ ಸಾಧನೆ ಮಾಡಿದೆ. ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ ಟೀಂ ಇಂಡಿಯಾ ಎರಡು ಬಾರಿ (2014, 2018) ಏಕದಿನ ಮಾದರಿಯಲ್ಲಿ ವಿಶ್ವಕಪ್ ಗೆದ್ದಿತ್ತು. ಈ ಎರಡೂ ಬಾರಿ ಭಾರತ ಫೈನಲ್‌ನಲ್ಲಿ ಪಾಕಿಸ್ತಾನದ ವಿರುದ್ಧ ಗೆದ್ದಿತ್ತು.