ಫೆಬ್ರವರಿ 7ರಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಂದ ಕಾರ್ಮಿಕರ ಮಕ್ಕಳಿಗೆ ಟ್ಯಾಬ್, ಶಾಲಾ ಕಿಟ್ ವಿತರಣಾ ಕಾರ್ಯಕ್ರಮ

1 Min Read

 

ಮಾಹಿತಿ ಕೃಪೆ :
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ ಫೆ. 06: ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಚಿತ್ರದುರ್ಗ ತಾಲ್ಲೂಕಿನ ಕಟ್ಟಡ ಕಾರ್ಮಿಕರ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ Syllabus Pre-Loaded Coaching  ಟ್ಯಾಬ್ ಮತ್ತು 5ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಶಾಲಾ ಕಿಟ್ ವಿತರಣಾ ಕಾರ್ಯಕ್ರಮವನ್ನು ಫೆಬ್ರವರಿ 7ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಅವರು ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ಹಾಗೂ ಶಾಲಾ ಕಿಟ್ ವಿತರಿಸುವರು ಎಂದು ಚಿತ್ರದುರ್ಗ ತಾಲ್ಲೂಕು ಕಾರ್ಮಿಕ ನಿರೀಕ್ಷಕರು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *