ಸೂರ್ಯನ ಉದಯ ತಾವರೆಗೆ ಜೀವಾಳ, ಚಂದ್ರಮನುದಯ ನೈದಿಲೆಗೆ ಜೀವಾಳ, ಕೂಪರ ಠಾವಿನಲ್ಲಿ ಕೂಟ ಜೀವಾಳವಯ್ಯಾ, ಒಲಿದ ಠಾವಿನಲ್ಲಿ ನೋಟ ಜೀವಾಳವಯ್ಯಾ.ಕೂಡಲಸಂಗನ ಶರಣರ ಬರವೆನಗೆ ಪ್ರಾಣ ಜೀವಾಳವಯ್ಯಾ. ಭಾರತ ಹಲವು ಧರ್ಮ, ಜಾತಿ, ಭಾಷೆ, ಸಂಸ್ಕೃತಿ, ಜನಾಂಗಗಳ ಶಾಂತಿಯ ತೋಟ. ಇಲ್ಲಿ ಅನೇಕ ಹಬ್ಬ, ಹುಣ್ಣಿಮೆಗಳ ಆಚರಣೆ ಪರಂಪರೆಯಿಂದಲೂ ನಡೆದುಕೊಂಡು ಬಂದಿದೆ. ಇಂಥಹ ಹಬ್ಬಗಳಲ್ಲಿ ಭಾರತೀಯರ ಪಾಲಿಗೆ ತುಂಬಾ ಮಹತ್ವದ ಹಬ್ಬ ಯುಗಾದಿ. ಆ ಪದವೇ ಹೇಳುವಂತೆ ಆ ವರ್ಷದ ಮೊದಲದಿನ. ಯುಗ ಯುಗಗಳನ್ನು ಕಳೆದರೂ ಯುಗಾದಿ ಮತ್ತೆ ಮರಳಿ ಬರುತ್ತದೆ. ಭಾರತೀಯರಿಗೆ ಯುಗಾದಿಯೇ ಹೊಸ ವರ್ಷ. ಅಲ್ಲಿಂದಲೇ ನಮ್ಮ ಚಟುವಟಿಕೆಗಳು …