ಚಳ್ಳಕೆರೆ(ಏ.25) : ತಾಲ್ಲೂಕು ರೈತ ಸಂಘ ತಾಲೂಕಾಡಳಿತ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ನೇಗಿಲು ಮನೆ ಮಾಡುವ ಅರ್ಥಾತ್ ಹೊನ್ನಾರು ಹೂಡುವ ಕಾರ್ಯಕ್ರಮವನ್ನು ಏಪ್ರಿಲ್ 27 ರಂದು ನನ್ನಿವಾಳ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು.
ನಗರದ ತಾಲೂಕ ಕಚೇರಿಯಲ್ಲಿ ವಿವಿಧ ರೈತ ಸಂಘಟನೆಗಳು ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ರೈತನಿಗೂ ಮತ್ತು ನೇಗಿಲಿಗೂ ಅವಿನಾಭಾವ ಸಂಬಂಧ ಇರುವುದರಿಂದ ವಸಂತಮಾಸದಲ್ಲಿ ಮುಂಗಾರು ಹಂಗಾಮು ಪ್ರಾರಂಭವಾದ ನಂತರ ರೈತನು ತನ್ನ ಜಮೀನನ್ನು ಹಸನು ಮಾಡಲು ಆರಂಭಿಸುತ್ತಾನೆ. ಇದನ್ನೇ ಹಳ್ಳಿಗಾಡಿನಲ್ಲಿ ನೇಗಿಲು ಮನೆ ಮಾಡುವ ಕಾರ್ಯಕ್ರಮ ಅಥವಾ ಹೊನ್ನಾರು ಹೂಡುವ ಕಾರ್ಯಕ್ರಮ (ಮೊದಲು ಮಾಡುವುದು) ಎಂದು ಮಧ್ಯಕರ್ನಾಟಕದಲ್ಲಿ ಪುರಾತನಕಾಲದಿಂದಲ್ಲೂ ಈ ಪದ್ದತಿ ನಡೆದು ಬಂದಿದೆ.
ಕಾರ್ಯಕ್ರಮದಲ್ಲಿ ಆಯ್ದ 9 ಜೊತೆ ಹೋರಿ ಜೋಡೆತ್ತುಗಳು ಮತ್ತು ನೇಗಿಲುಗಳೊಂದಿಗೆ ಭೂಮಿ ಮನೆ ಮಾಡುವಂತ ಕಾರ್ಯಕ್ರಮ ಪ್ರಾರಂಭವಾಗುತ್ತದೆ.
ತದನಂತರ ಆಯ್ದ ರೈತರೊಂದಿಗೆ ಭೂಮಿಯ ಬಳಕೆ ಹಂಗಾಮಿನಲ್ಲಿ ಬಿತ್ತನೆ ಮತ್ತು ನೀರಿನ ಸದ್ಬಳಕೆ ವಿಚಾರದಲ್ಲಿ ರೈತರೊಂದಿಗೆ ಸಂವಾದ ಕಾರ್ಯಕ್ರಮ ಇರುತ್ತದೆ.
ಸಮಾರಂಭವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಲಿದ್ದು ಚಳ್ಳಕೆರೆ ತಾಲೂಕಿನ ಪ್ರಗತಿಪರ ರೈತರು ರೈತ ಮುಖಂಡರುಗಳು ಚುನಾಯಿತ ಪ್ರತಿನಿಧಿಗಳು ಪಾಲ್ಗೊಳ್ಳಬೇಕೆಂದು ಕೋರಿದರು.
ರೈತ ಸಂಘದ ಮುಖಂಡ ಸೋಮಗುದ್ದು ರಂಗಸ್ವಾಮಿ, ಕೆಪಿ ಭೂತಯ್ಯ ಮತ್ತು ರೆಡ್ಡಿಹಳ್ಳಿ ವೀರಣ್ಣ ಸಹಾಯಕ ಕೃಷಿ ನಿರ್ದೇಶಕ ಅಶೋಕ್, ತೋಟಗಾರಿಕೆ ಸಹಾಯಕ ನಿರ್ದೇಶಕ ವಿರುಪಾಕ್ಷಪ್ಪ, ಹಂಪಣ್ಣ ತಿಪ್ಪೇಸ್ವಾಮಿ, ಹನುಮಂತಪ್ಪ, ಚಂದ್ರಣ್ಣ, ರಾಜಣ್ಣ ,ತಿಪ್ಪಣ್ಣ, ರೈತ ಮುಖಂಡರು ಹಾಗೂ ರೈತರು ಇದ್ದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…