Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೊಲೀಸರ ವಿರುದ್ಧ ಕ್ರಮ ಜರುಗಿಸಿ : ಎಸ್ ಪಿ ಗೆ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 15 : ಕಳೆದ ತಿಂಗಳು ಹಿರಿಯೂರಿನಲ್ಲಿ ನಡೆದ ಶಕ್ತಿ ಗಣಪತಿ ಮೆರವಣಿಗೆ ಸಂದರ್ಭದಲ್ಲಿ ಜಪ್ತಿ ಮಾಡಿದ ವಾಹನ(ಸಂ. ಕೆಎ-52 ಬಿ-0927) ಬಿಡಿಸಿಕೊಂಡು ಬರಲು ಠಾಣೆಗೆ ಹೋದಾಗ ಅಲ್ಲಿನ ಇನ್ಸ್‌ಪೆಕ್ಟರ್ ರಾಘವೇಂದ್ರ ಹಾಗೂ ಪೇದೆ ಅಲ್ಲಭಕ್ಷಿ ಇವರುಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ ಅಗೌರವವಾಗಿ ನಡೆದುಕೊಂಡಿದ್ದಾರೆ. ಇವರುಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ದಲಿತ ಸಂಘರ್ಷ ಸಮಿತಿ ಪರಿವರ್ತನಾ ವಾದದಿಂದ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಡಿಜೆ.ಮೆರವಣಿಗೆಯಲ್ಲಿ ಸುನಿಲ್‍ಕುಮಾರ್‍ರವರಿಗೆ ಸೇರಿದ ವಾಹನ ವಶಕ್ಕೆ ಪಡೆದಿರುವುದನ್ನು ಬಿಡಿಸಿಕೊಂಡು ಬರುವುದಕ್ಕಾಗಿ ಠಾಣೆಗೆ ಹೋದ ಸಂದರ್ಭದಲ್ಲಿ ಇನ್ಸ್‍ಪೆಕ್ಟರ್ ರಾಘವೇಂದ್ರ, ಪೇದೆ ರಾಘವೇಂದ್ರ ಹಾಗೂ ಕೋರ್ಟ್ ಪಿ.ಸಿ. ಅಲ್ಲಾಭಕ್ಷಿ ಇವರುಗಳು ನಮ್ಮನ್ನು ಗದರಿಸಿ ಏಕವಚನದಲ್ಲಿ ಮಾತನಾಡಿ ಅಸಭ್ಯವಾಗಿ ವರ್ತಿಸಿದ್ದಾರೆ. ಪೊಲೀಸ್ ಜನಸ್ನೇಹಿಯಾಗಿರಬೇಕೆ ವಿನಃ ದೌರ್ಜನ್ಯವೆಸಗುವುದು ಸರಿಯಲ್ಲ. ಹಾಗಾಗಿ ಇವರುಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ದಲಿತ ಸಂಘರ್ಷ ಸಮಿತಿ ಪರಿವರ್ತನಾ ವಾದದ ರಾಜ್ಯ ಸಂಚಾಲಕ ಕೆ.ಮಂಜುನಾಥ ಹೆಗ್ಗೆರೆ ಜಿಲ್ಲಾ ರಕ್ಷಣಾಧಿಕಾರಿಯವರಲ್ಲಿ ವಿನಂತಿಸಿದರು.

ಜಿಲ್ಲಾಧ್ಯಕ್ಷ ಕೋದಂಡರಾಮ, ಉಪಾಧ್ಯಕ್ಷ ಪ್ರಸಾದ್, ಹೆಚ್.ಎನ್.ವೇಣು, ರಾಜ್ಯ ಉಪಾಧ್ಯಕ್ಷ ಚಂದ್ರಪ್ಪ, ನಾಗೇಂದ್ರ, ಭಾಗ್ಯಮ್ಮ ಇವರುಗಳು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...