Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಳ್ಳಕೆರೆ ಗೇಟ್ ಅಂಡರ್‌ ಪಾಸ್ ನಲ್ಲಿ ವಾಹನ ನಿಲ್ಲಿಸುವವರ ವಿರುದ್ಧ ಕ್ರಮವಹಿಸಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 17 : ನಗರದ ಚಳ್ಳಕೆರೆ ಗೇಟ್ ಬಳಿಯ ಬಸ್ ತಂಗುದಾಣ ನಿರ್ಮಾಣಕ್ಕೆ ತಕ್ಷಣ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಸ್ ತಂಗುದಾಣ ನಿರ್ಮಾಣಕ್ಕೆ ಎನ್‍ಒಸಿ ನೀಡಿ, ಆರು ತಿಂಗಳಾದರೂ ಕಾಮಗಾರಿ ಪ್ರಾರಂಭ ಮಾಡದಿದ್ದರೆ ಹೇಗೆ? ಎಂದು ಪ್ರಶ್ನಿಸಿದರು.  ಚಳ್ಳಕೆರೆ ಗೇಟ್ ಬಳಿ ಹೊಸ ಮಾದರಿಯಲ್ಲಿ ತಂಗುದಾಣ ನಿರ್ಮಿಸಲು ಶಾಸಕರು ಅನುದಾನ ಒದಗಿಸಿದ್ದು, ಕೆಆರ್‍ಐಡಿಎಲ್‍ನಿಂದ ಈಗಾಗಲೇ ಟೆಂಡರ್ ಕರೆಯಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.  ಕೂಡಲೇ ಕಾಮಗಾರಿ ಆರಂಭಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಚಳ್ಳಕೆರೆ ಗೇಟ್‍ನಲ್ಲಿ ಸಂಚಾರ ದಟ್ಟಣೆ ನಿಯಂತ್ರಣ ಮಾಡಬೇಕಿದೆ. ಚಳ್ಳಕೆರೆ ಗೇಟ್ ಬಳಿಯ ಅಂಡರ್‌ ಪಾಸ್ ಕೆಳಗಡೆ ದ್ವಿಚಕ್ರ ವಾಹನಗಳನ್ನು  ನಿಲ್ಲಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು, ನಿಲ್ಲಿಸುವವರ ವಿರುದ್ಧ ಕ್ರಮ ಜರುಗಿಸಬೇಕು ಹಾಗೂ ಸುಗಮ ಸಂಚಾರಕ್ಕೆ ಕ್ರಮ ವಹಿಸಬೇಕು. ಈ ಭಾಗದ ನಾಲ್ಕು ಕಡೆಯೂ ಫುಟ್‍ಪಾತ್ ಅತಿಕ್ರಮಣ ತೆರವುಗೊಳಿಸಿ ವಾಹನಗಳ ಪಾರ್ಕಿಂಗ್‍ಗೆ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...