ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಚಿತ್ರದುರ್ಗ : ಕಳೆದ ತಿಂಗಳ 28 ರಂದು ಬೀದರ್ ಜಿಲ್ಲೆ ಹುಮನಾಬಾದ್‌ನಲ್ಲಿ ತಹಶೀಲ್ದಾರ್ ಮೇಲೆ ಹಲ್ಲೆ ನಡೆಸಿರುವವರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಬೇಡ ಜಂಗಮ ಸಮಾಜದ ಸಂಸ್ಥೆ ವತಿಯಿಂದ ಇತ್ತೀಚೆಗೆ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ತಹಶೀಲ್ದಾರ್ ಡಾ.ಪ್ರದೀಪ್‌ಕುಮಾರ ಹಿರೇಮಠ ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಗೂಂಡಾಗಳಂತೆ ವರ್ತಿಸಿ ಅವಾಚ್ಯ ಶಬ್ದಗಳನ್ನು ಬಳಸಿ ಜೀವ ಬೆದರಿಕೆ ಹಾಕಿರುವುದನ್ನು ನೋಡಿದರೆ ಅಧಿಕಾರಿಗಳು ಹಾಗೂ ನೌಕರರಿಗೆ ರಕ್ಷಣೆ ಇಲ್ಲದಂತಾಗಿದೆ.
ಸಂವಿಧಾನದ ಆಶಯಗಳನ್ನು ಅರಗಿಸಿಕೊಳ್ಳದ ಕೆಲವರು ಇಂತಹ ಅಮಾನವೀಯ ಕೃತ್ಯಗಳಿಗೆ ಕೈಹಾಕುತ್ತಿರುವುದು ನಾಗರೀಕ ಸಮಾಜ ತಲೆತಗ್ಗಿಸುವಂತಾಗಿದೆ. ಮೊದಲಿನಿಂದಲೂ ಬೇಡ ಜಂಗಮ ಸಮಾಜದವರ ಮೇಲೆ ಇಂತಹ ಹಲ್ಲೆಗಳು ನಡೆಯುತ್ತಿದ್ದು, ಜಾತಿ ನಿಂದನೆ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ನೋವಿನ ಸಂಗತಿ. ಕೂಡಲೆ ಸರ್ಕಾರ ಎಚ್ಚೆತ್ತುಕೊಂಡು ಹುಮನಾಬಾದ್ ತಹಶೀಲ್ದಾರ್ ಮೇಲೆ ಹಲ್ಲೆ ನಡೆಸಿರುವವರಿಗೆ ಕಾನೂನು ರೀತಿ ಶಿಕ್ಷಿಸುವಂತೆ ಒತ್ತಾಯಿಸಿದರು.
ಜಿಲ್ಲಾ ಬೇಡ ಜಂಗಮ ಸಮಾಜ ಸಂಸ್ಥೆಯ ಅಧ್ಯಕ್ಷ ಡಿ.ಸೋಮಶೇಖರ ಮಂಡಿಮಠ, ಕಾರ್ಯಾಧ್ಯಕ್ಷ ಎಂ.ಟಿ.ಮಲ್ಲಿಕಾರ್ಜುನಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಸ್.ಷಡಾಕ್ಷರಯ್ಯ ಸೇರಿದಂತೆ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…