Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್‌ಎಸ್‌ಎಲ್‌ಸಿ ಉತ್ತಮ ಫಲಿತಾಂಶಕ್ಕಾಗಿ ಕ್ರಮವಹಿಸಿ : ಶಾಸಕ ಟಿ. ರಘುಮೂರ್ತಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 27 :
ಮುಂಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಉತ್ತಮ ಫಲಿತಾಂಶ ನೀಡುವ ಮೂಲಕ ಹಿಂದಿನ ವರ್ಷದ ಫಲಿತಾಂಶದ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಟಿ ರಘುಮೂರ್ತಿ ಅಧಿಕಾರಿಗಳಿಗೆ ತಿಳಿಸಿದರು.

 

ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತ್ರೈಮಾಜಿ ಕೆಡಿಪಿ
ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಯಾವುದೇ ವಿದ್ಯಾರ್ಥಿ ಅನುತ್ತೀರ್ಣರಾಗದಂತೆ ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಉತ್ತೀರ್ಣವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಬಿಇಒ ಕೆ ಎಸ್ ಸುರೇಶ್ ಹಾಗೂ ವಿದ್ಯಾರ್ಥಿ ನಿಲಯಗಳ ವಾರ್ಡನ್ ಗಳಿಗೆ ಸೂಚನೆ ನೀಡಿದರು.

ಈ ವೇಳೆ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆಗೆ 5,166 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು 4585 ವಿದ್ಯಾರ್ಥಿಗಳು ಪರೀಕ್ಷೆಗೆ ಕೂರಲು ಅರ್ಹರಿದ್ದಾರೆ ಈಗಾಗಲೇ ಪರೀಕ್ಷೆಗಾಗಿ ಎಲ್ಲ ತಯಾರಿ ಮಾಡಿಕೊಂಡಿದ್ದು 20 ಅಂಶಗಳು ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತಂದಿದ್ದು ಬೆಳಗಿನ ವೇಕ್ ಅಪ್ ಕಾಲ್ ಗುಂಪು ಅಧ್ಯಯನ ವಿಶೇಷ ತರಗತಿ ಸೇರಿದಂತೆ ಹಲವು ಕಾರ್ಯಕ್ರಮಗಳ ಮೂಲಕ ಕಲಿಕೆಯಲ್ಲಿ ಸಿ ಗ್ರೇಡ್ ನಲ್ಲಿರುವ ಹಿಂದುಳಿದ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳು ಉತ್ತೀರ್ಣರಾಗಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಕೃಷಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿ ಶೇಂಗಾ ಬೆಳಗೆ ಬೆಂಕಿ ಸೀಡೆರೋಗ ತಗಲಿತ್ತು ಇದರ ಬಗ್ಗೆ ರೈತರ ಸಭೆ ನಡೆಸಿ ರೈತರಿಗೆ ರೋಗ ನಿವಾರಣೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಬೆಳೆಗಳಿಗೆ ರೋಗ ಬರದಂತೆ ಔಷದ ಸಿಂಪಡಣೆ ಬಗ್ಗೆ ತರಬೇತಿ ನೀಡಲಾಗಿದೆ ಹೊಸ ತಳಿಯ ಬೀಜಗಳನ್ನು ವಿತರಿಸಿ ರೈತರ ಬೆಳೆಗೆ ಉತ್ತೇಜನ ನೀಡಲಾಗಿದೆ ತಾಲೂಕಿನಲ್ಲಿ 4,900 ಎಕ್ಟರ್ ಬಿತ್ತನೆಯಾಗಿದ್ದು ಶೇಕಡ 95ರಷ್ಟು ರೈತರು ಬಿತ್ತನೆ ಮಾಡಿದ್ದರು ಮಳೆ ಕೊರತೆಯಿಂದಾಗಿ ಬೆಳೆ ಕೈ ಸೇರಿಲ್ಲ ಎಂದರು. ತೊಗರಿ ಬೆಳೆಗಾರರ ಬೇಡಿಕೆಗೆ ಸರ್ಕಾರದ ಮಟ್ಟದ ಅಧಿಕಾರಿಗಳು ಸೂಕ್ತವಾಗಿ ಸ್ಪಂದನೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. ತೋಟಗಾರಿಕೆ ಇಲಾಖೆಯ ಅಡಿಕೆ ಬೆಳೆಗೆ ತಾಲೂಕಿನ ರೈತರು ಹೆಚ್ಚಾಗಿ ಸ್ಪಂದಿಸಿದ್ದು 2013ರಲ್ಲಿ 763 ಹೆಕ್ಟರ್ ಇದ್ದ ಅಡಿಕೆ ಇಂದು 6600 ಹೆಕ್ಟರ್ ನಷ್ಟು ಹೆಚ್ಚಳವಾಗಿದೆ ಎಂದರು.

ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಾಹಿತಿ ನೀಡಿದ ಸಿಡಿಪಿಓ ರಾಜ ನಾಯಕ್ ಆಹಾರ ಇಲಾಖೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಗೃಹಲಕ್ಷ್ಮಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುವುದು ಗಾಗಲೇ ಐಟಿಜಿಎಸ್‌ಟಿ ಪಾವತಿದಾರರನ್ನು ಗುರುತಿಸಲಾಗಿದ್ದು ಮರಣ ಹೊಂದಿದವರನ್ನು ಹಾಗೂ ಪುರುಷ ಪ್ರಧಾನ ಪಡಿತರ ಚೀಟಿಗಳನ್ನು ಗುರುತಿಸಿದ್ದು ಇಂತಹ ಫಲಾನುಭವಿಗಳನ್ನು ಗೃಹಲಕ್ಷ್ಮೀ ಯೋಜನೆಯಿಂದ ಕೈ ಬಿಡಲಾಗಿದೆ. 2006ರಲ್ಲಿ ಪ್ರಾರಂಭಗೊಂಡ ಭಾಗ್ಯಲಕ್ಷ್ಮಿ ಯೋಜನೆಯ ಸೌಲಭ್ಯವನ್ನು 18 ವರ್ಷ ತುಂಬಿದ ಯುವತಿಯರಿಗೆ ಹಣ ವರ್ಗಾಯಿಸಲಾಗಿದೆ ಅಲ್ಲದೆ ಇಲಾಖೆಯಲ್ಲಿ ಎಲ್ಕೆಜಿ ಯುಕೆಜಿ ಪ್ರಾರಂಭವಾಗಿದ್ದು ಆ ಶಾಲೆಗಳಿಗೆ ಎಲ್ಇಡಿ ಟಿವಿ ಕುಡಿಯುವ ನೀರಿನ ವ್ಯವಸ್ಥೆ ಪದವಿ ಓದಿದ ಶಿಕ್ಷಕಿಯರನ್ನು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು.

ಅಕ್ರಮ ಪಡಿತರಕ್ಕೆ ಕಡಿವಾಣ ಹಾಕಿ:, ಸಭೆಯಲ್ಲಿ ಶಾಸಕ ರಘುಮೂರ್ತಿ ಮಾತನಾಡಿ ಅಕ್ರಮ ಅಕ್ಕಿ ಸಾಗಾಣಿಕೆ ವಿಚಾರವಾಗಿ ದೂರುಗಳು ಕೇಳಿ ಬದಿದ್ದು ಈ ಬಗ್ಗೆ ಅಧಿಕಾರಿಗಳು ನಿಗ ವಹಿಸಬೇಕು ಹಾಗೂ ನ್ಯಾಯಬೆಲೆ ಅಂಗಡಿಗಳಲ್ಲಿ ತೆಗೆದುಕೊಳ್ಳುವ ಪಡಿತರವನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡುವುದನ್ನು ಕಡಿವಾಣ ಹಾಕಬೇಕು ಪಡಿತರ ಅಕ್ಕಿಯನ್ನು ತೆಗೆದುಕೊಳ್ಳುವ ವ್ಯಾಪಾರಸ್ಥರ ಮೇಲೆ ಪೊಲೀಸ್ ಇಲಾಖೆ fir ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಸೂಚನೆ ನೀಡಿದರು.

ಎಪಿಎಂಸಿ ಅಧಿಕಾರಿಗೆ ತರಾಟೆ: ಎಪಿಎಂಸಿ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪನೆಯಾಗಿದ್ದು ಆದರೆ ರೈತರಿಂದ ಮೆಕ್ಕೆಜೋಳ ಖರೀದಿಯನ್ನು ಮಾಡುತ್ತಿಲ್ಲ ಎಂದು ರೈತ ಮುಖಂಡ ಕೆಪಿ ಬೂತಯ್ಯ ಆರೋಪಿಸಿದ ಹಿನ್ನೆಲೆಯಲ್ಲಿ ಶಾಸಕರು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು ರೈತರಿಗೆ ಸೂಕ್ತ ಮಾಹಿತಿ ನೀಡುವ ಮೂಲಕ ಅಧಿಕಾರಿಗಳು ರೈತರ ಪರವಾಗಿ ಕೆಲಸ ನಿರ್ವಹಿಸಬೇಕು ಅವರಿಗೆ ಕಾಲಕಾಲಕ್ಕೆ ಸೂಕ್ತ ಮಾಹಿತಿ ನೀಡುವ ಮೂಲಕ ರೈತರನ್ನು ಅಲೆದಾಡಿಸಬಾರದು ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಿದರು. ಇದೇ ವೇಳೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಕಾರ್ಯ ನಡೆಸಿದರು

ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ
ತಾಲೂಕು ಪಂಚಾಯತಿ ಆಡಳಿತಾಧಿಕಾರಿ ಹಾಗೂ ಕೃಷಿ ಜಂಟಿ ನಿರ್ದೇಶಕ ಡಾ. ಬಿ.ಮಂಜುನಾಥ್
ತಾಲೂಕು ಪಂಚಾಯತಿ ಇ ಓ ಶಶಿಧರ್ ಡಿವೈಎಸ್ಪಿ ಸತ್ಯನಾರಾಯಣರಾವ್, ತಹಸೀಲ್ದಾರ್ ರೆಹಾನ್ ಪಾಷಾ ಚಿತ್ರದುರ್ಗ ಈ ಓ ರವಿಕುಮಾರ್ ನಗರಸಭೆ ಪೌರಾಯುಕ್ತೆ ಡಾ.ನಾಗವೇಣಿ ಕೆಡಿಪಿ ಸದಸ್ಯರಾದ ಬಸವರಾಜ್, ಜಾಕಿರ್ ಹುಸೇನ್, ನೇತ್ರಾವತಿ ,ವಿಶ್ವನಾಥ ರೆಡ್ಡಿ ಸೇರಿದಂತೆ ಕೃಷಿ ಅಧಿಕಾರಿ ಎಸ್.ಟಿ.ರಮೇಶ,ಶಿವರಾಜ್,ಸಿಡಿಪಿಓ ರಾಜನಾಯ್ಕ್,ಶ್ರೀನಿವಾಸ್ ಬಾಬು ತೋಟಗಾರಿಕ ಸಹಾಯಕ ನಿರ್ದೇಶಕ ಕುಮಾರ್. ಎಪಿಎಂಸಿ ಪ್ರಭು, ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now