Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಳಮೀಸಲಾತಿ ಶೀಘ್ರ ಜಾರಿಗೆ ಕ್ರಮಕೈಗೊಳ್ಳಿ : ಮಾಜಿ ಸಚಿವ ಎಚ್.ಆಂಜನೇಯ ಮನವಿ

---Advertisement---

 

ಚಿತ್ರದುರ್ಗ, ಜು. 02 :  ಒಳಮೀಸಲಾತಿ ಜಾರಿಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ಸಮೀಕ್ಷೆ ಕಾರ್ಯ ಮತ್ತೆ ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡಬಾರದು ಎಂದು ಮಾಜಿ ಸಚಿವ ಎಚ್.ಆಂಜನೇಯ ಕೋರಿದರು.

ಬೆಂಗಳೂರಿನಲ್ಲಿ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಆಯೋಗದ ಕಚೇರಿಗೆ ಬುಧವಾರ ಭೇಟಿ ಮಾಡಿ ಮನವಿ ಮಾಡಿಕೊಂಡ ಅವರು, ಮೂರು ದಶಕಗಳ ಮಾದಿಗ ಸಮುದಾಯದ ಸಮಗ್ರ ಹೋರಾಟದ ಫಲ ಒಳಮೀಸಲಾತಿ ಜಾರಿಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದ್ದು, ಅದನ್ನು ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬದ್ಧರಾಗಿದ್ದಾರೆ. ಆದರೆ, ಎಕೆ, ಎಡಿ, ಆದಿಆಂಧ್ರ ಈ ಮೂರು ಜಾತಿಸೂಚಕಗಳಲ್ಲಿ ಮಾದಿಗ, ಛಲವಾದಿ ಸಮುದಾಯದವರುಗುರುತಿಸಿಕೊಂಡಿರುವುದೇ ಮೀಸಲಾತಿ ಹಂಚಿಕೆ ಸಮಸ್ಯೆ ಆಗಿದೆ ಎಂದರು.

ಈ ಗೊಂದಲಕ್ಕೆ ತೆರೆ ಎಳೆದು ಅವರರ ಸಂಖ್ಯೆ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಗುರುತಿಸಲು ಪರಿಶಿಷ್ಟರಿಗೆ ಸೀಮಿತಗೊಳಿಸಿ ರಾಜ್ಯದಲ್ಲಿ ಮೇ 5ರಂದು ಜಾತಿಗಣತಿ ಸಮೀಕ್ಷೆ ಆರಂಭಗೊಂಡಿದೆ. ಆರಂಭದಲ್ಲಿ ತಾಂತ್ರಿಕ ಸಮಸ್ಯೆ ಕಾರಣಕ್ಕೆ ಆತಂಕ,ಗೊಂದಲಕ್ಕೆ ಕಾರಣವಾಗಿದ್ದು, ಕಾಲಕ್ರಮೇಣ ಸುಗಮವಾಗಿ ಆಗಿದೆ. ಆದರೆ, ಬೆಂಗಳೂರಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲವೆಂಬ ಕಾರಣಕ್ಕೆ ಮೂರು ಬಾರಿ ಸಮೀಕ್ಷೆಯನ್ನು ವಿಸ್ತರಣೆ ಮಾಡಲಾಗಿತ್ತು ಎಂದು ಹೇಳಿದರು.

ಈಗ ಮತ್ತೊಮ್ಮೆ ಬೆಂಗಳೂರು ಮಹಾನಗರ ಪಾಲಿಕೆಗೆ ಸೀಮಿತಗೊಳಿಸಿ ಜು.6ರ ವರೆಗೆ ವಿಸ್ತರಣೆ ಮಾಡಲಾಗಿದೆ. ಇದೇ ಅಂತಿಮ ಅವಕಾಶ ಆಗಬೇಕು. ಯಾವುದೇ ಕಾರಣಕ್ಕೂ ಇನ್ನೊಮ್ಮೆ ವಿಸ್ತರಣೆ ಮಾಡಲೇಬಾರದು. ಈ ನಿಟ್ಟಿನಲ್ಲಿ ಆಯೋಗ ಕಠಿಣ ಕ್ರಮಕೈಗೊಳ್ಳಬೇಕು ಎಂದು ಕೋರಿದರು.

ಈಗಾಗಲೇ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳ್ಳುವವರೆಗೂ ಬ್ಯಾಕ್‍ಲಾಗ್ ಸೇರಿ ಎಲ್ಲ ರೀತಿಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ತಡೆ ನೀಡಿದೆ. ಹಲವು ತಿಂಗಳುಗಳೇ ಆಗಿರುವುದರಿಂದ ಬಹಳಷ್ಟು ವಿದ್ಯಾವಂತ ನಿರುದ್ಯೋಗಿಗಳು ಉದ್ಯೋಗಕ್ಕಾಗಿ ಚಾತಕಪಕ್ಷಿಗಳಂತೆ ಕಾಯುತ್ತಿದ್ದಾರೆ. ಜೊತೆಗೆ ಒಳಮೀಸಲಾತಿ ಜಾರಿ ವಿಷಯದಲ್ಲಿ ಅನಗತ್ಯ ಗೊಂದಲ ಹುಟ್ಟುಹಾಕುವ ಪ್ರಯತ್ನ ನಡೆಯುತ್ತಿದೆ. ಆದ್ದರಿಂದ ಏಕಸದಸ್ಯ ಆಯೋಗದ ಅಧ್ಯಕ್ಷರಾದ ತಾವು ಯಾವುದೇ ಕಾರಣಕ್ಕೂ ಸಮೀಕ್ಷೆ ಜು.6ರ ನಂತರ ವಿಸ್ತರಣೆ ಮಾಡಬಾರದು ಎಂದು ತಿಳಿಸಿದರು.

ಜೊತೆಗೆ ಜುಲೈ 06 ಸಮೀಕ್ಷೆಗೆ ಅಂತಿಮ ದಿನವಾಗಲಿದ್ದು, ತಕ್ಷಣವೇ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವ ಮೂಲಕ ಈ ತಿಂಗಳಾಂತ್ಯದಲ್ಲಿಯೇ ಒಳಮೀಸಲಾತಿ ಜಾರಿಗೊಳ್ಳುವ ರೀತಿ ಸಹಕರಿಸಬೇಕು. ಈ ನಿಟ್ಟಿನಲ್ಲಿ ತಾವು ಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವ ಮೂಲಕ ನೊಂದ, ಕಾಯುತ್ತಿರುವ ಸಮುದಾಯಗಳಿಗೆ ನ್ಯಾಯ ಒದಗಿಸಬೇಕೆಂದು ಕೋರಿದರು.

ಈ ಸಂದರ್ಭದಲ್ಲಿ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ಎಂ.ಆರ್.ವೆಂಕಟೇಶ್ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...