Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಂಚಾರಿ ಆರೋಗ್ಯ ಘಟಕದ ಸದುಪಯೋಗ ಪಡೆದುಕೊಳ್ಳಿ :  ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಆ.17) :  ಗಣಿ ಬಾಧಿತ ಪ್ರದೇಶದ ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಿಲ್ಲಾ ಖನಿಜ ಘಟಕದ ವತಿಯಿಂದ ಸಂಚಾರಿ ಆರೋಗ್ಯ ಘಟಕ ನೀಡಲಾಗಿದೆ. ಸಾರ್ವಜನಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹೇಳಿದರು.

ಚಿತ್ರದುರ್ಗ ನಗರದ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಗುರುವಾರ ಸಂಚಾರಿ ಆರೋಗ್ಯ  ಘಟಕದ ವಾಹನಕ್ಕೆ  ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಸಂಚಾರಿ ಆರೋಗ್ಯ ಘಟಕ ಜನರಿಗೆ ಬಹಳ ಉಪಯುಕ್ತವಾಗಿದೆ. ಇದರ ಮೂಲಕ ಗ್ರಾಮಗಳಿಗೆ ತೆರಳಿ ಆರೋಗ್ಯ ಸೇವೆಯನ್ನು ಒದಗಿಸಲಾಗುತ್ತದೆ. ಇದರಿಂದ ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆ ತಲುಪಿಸಲಾಗುತ್ತದೆ. ಈ ಆರೋಗ್ಯ ಘಟಕದಲ್ಲಿ ವೈದ್ಯರು, ಫಾರ್ಮಸಿಸ್ಟ್, ಪ್ರಯೋಗಶಾಲಾ ತಜ್ಞರು, ಶುಶ್ರೂಷಕರು, ವಾಹನ ಚಾಲಕ ಹಾಗೂ ಡಿ ದರ್ಜೆ ನೌಕರರು ಕರ್ತವ್ಯ ನಿರ್ವಹಿಸುತ್ತಾರೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಆರ್.ರಂಗನಾಥ್ ಮಾತನಾಡಿ, ಗಣಿ ಬಾಧಿತ ಪ್ರದೇಶಗಳಲ್ಲಿ ವೈದ್ಯಕೀಯ ಸೇವೆ ನೀಡುವುದರ ಮೂಲಕ, ಸಾರ್ವಜನಿಕರಲ್ಲಿ ಸಾಧಾರಣವಾಗಿ ಕಂಡುಬರುವ ಗಂಭೀರ ಸ್ವರೂಪದ ಕಾಯಿಲೆಗಳಿಗೆ ಸಂಚಾರಿ ಚಿಕಿತ್ಸೆ ಪ್ರಯೋಗಾಲಯಗಳ ಪರೀಕ್ಷೆ ಮಾಡಲಾಗುವುದು.

ಜೊತೆಗೆ ಬಾಣಂತಿ ಗರ್ಭಿಣಿಯರ ಆರೈಕೆ, ತಾಯಿ ಮಕ್ಕಳ ಲಸಿಕೆ ಕಾರ್ಯಕ್ರಮ, ಕುಟುಂಬ ಕಲ್ಯಾಣ ಯೋಜನಾ ಅನುಷ್ಠಾನ, ಮಾಹಿತಿ ಶಿಕ್ಷಣ ಸಂವಹನ, ಆರೋಗ್ಯ ಜಾಗತಿಯನ್ನು ಸಂಚಾರಿ ಆರೋಗ್ಯ ಘಟಕದಿಂದ ನಿರ್ವಹಿಸಲಾಗುವುದು. ತುರ್ತು ಸಂದರ್ಭದಲ್ಲಿ ಉನ್ನತ ಮಟ್ಟದ ಆಸ್ಪತ್ರೆಗಳಿಗೆ ರೋಗಿಗಳನ್ನು ನಿರ್ದೇಶನ ಮಾಡಲಾಗುವುದು ಎಂದರು.

ತಾಲೂಕು ಅರೋಗ್ಯ ಅಧಿಕಾರಿ ಡಾ.ಬಿ.ವಿ.ಗಿರೀಶ್ ಮಾತನಾಡಿ, ತಾಲೂಕಿನ 46 ಹಳ್ಳಿಗಳಿಗೆ ಕ್ರೀಯಾ ಯೋಜನೆ ಅನುಸಾರ ನಿಗದಿತ ದಿನಾಂಕಗಳಂದು ಸಂಚಾರಿ ಆರೋಗ್ಯ ಘಟಕ ಭೇಟಿ ಆರೋಗ್ಯ ಸೇವೆ ಒದಗಿಸಲಿದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್, ಬಿ.ಮುಗಪ್ಪ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜೆ.ಆರ್.ಗೌರಮ್ಮ, ಹೆಚ್.ಬಿ.ಪೂಜಾರ್,   ಕೆ.ಎ.ಮಾರುತಿ ಪ್ರಸಾದ್,  ಗಂಗಾಧರೆಡ್ಡಿ, ರಂಗಾರೆಡ್ಡಿ, ಶ್ರೀಧರ್, ಆಶಾ ಕಾರ್ಯಕರ್ತೆಯರು ಸೆರಿದಂತೆ ಇತರೆ ಸಿಬ್ಬಂದಿ ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...