Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯಾರ್ಜನೆ ಜತೆಗೆ ಆರೋಗ್ಯ ಕಾಳಜಿ ವಹಿಸಿ : ಡಾ.ಜೆ.ಕರಿಯಪ್ಪ ಮಾಳಿಗೆ

---Advertisement---

 

ಚಿತ್ರದುರ್ಗ. ಸೆ.18: ವಿದ್ಯಾರ್ಥಿಗಳು ವಿದ್ಯಾರ್ಜನೆಯ ಜತೆಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಸರ್ಕಾರಿ ಕಲಾ ಕಾಲೇಜು  (ಸ್ವಾಯತ್ತ) ಪ್ರಾಂಶುಪಾಲ ಡಾ.ಜೆ.ಕರಿಯಪ್ಪ ಮಾಳಿಗೆ ತಿಳಿಸಿದರು.

ನಗರದ ಸರ್ಕಾರಿ ಕಲಾ ಕಾಲೇಜಿನ ಡಾ.ಬಿ.ಆರ್.ಅಂಬೇಡ್ಕರ್ ಜ್ಞಾನ ಸಭಾಂಗಣದಲ್ಲಿ ಬುಧವಾರ ಭಾರತೀಯ ರೆಡ್‍ಕ್ರಾಸ್ ಜಿಲ್ಲಾ ಶಾಖೆ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಹಾಗೂ ಸೌಖ್ಯ ಹೆಲ್ತ್ ಮತ್ತು ಸ್ಕಿನ್ ಕೇರ್ ಸಂಯುಕ್ತಾಶ್ರಯದಲ್ಲಿ ಪ್ರಥಮ ಚಿಕಿತ್ಸಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಸಂಪನ್ಮೂಲ ವ್ಯಕ್ತಿ ಡಾ.ಸಂತೋಷ್ ಉಜ್ಜನಪ್ಪ ಅವರು ಪ್ರಥಮ ಚಿಕಿತ್ಸಾ ದಿನದ ಆಚರಣೆಯ ಹಿನ್ನೆಲೆ ತಿಳಿಸಿದರು. ಅಪಘಾತ, ಸುಟ್ಟ ಗಾಯ, ಬೆಂಕಿ ಅವಘಡ, ಮೂರ್ಛೆ, ಮೂಳೆ ಮುರಿತ, ಕಾಲ್ತುಳಿತ ಮುಂತಾದ ಅವಘಡಗಳು ಸಂಭವಿಸಿದಾಗ ಅದನ್ನು ಸಮರ್ಥವಾಗಿ ಎದುರಿಸುವ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.

ಹೃದಯಾಘಾತ ಮತ್ತು ಹೃದಯ ಸ್ಥಂಬನ ಸಂಭವಿಸಿದಾಗ ಹೇಗೆ ರಕ್ಷಿಸಬಹುದು ಎಂಬುದನ್ನು ಪ್ರಾತ್ಯಕ್ಷಿಕೆಯ ಮೂಲಕ ವಿದ್ಯಾರ್ಥಿಗಳ ಮನ ಮುಟ್ಟುವಂತೆ ತಿಳಿಸಿಕೊಟ್ಟರು.

ಸಂಪನ್ಮೂಲ ವ್ಯಕ್ತಿ ಜಿಲ್ಲಾಸ್ಪತ್ರೆಯ ಬಸವರಾಜಪ್ಪ ಅವರು ಯುವ ಸಮುದಾಯವು ಸೋಂಕು ರೋಗಗಳ ಹರಡುವಿಕೆ, ಅದರ ಅಪಾಯಗಳು ಮತ್ತು ಅದರಿಂದ ರಕ್ಷಿಸಿಕೊಳ್ಳುವ ವಿವಿಧ ವಿಧಾನಗಳನ್ನು ತಿಳಿಸಿದರು. ವಿಶೇಷವಾಗಿ ಏಡ್ಸ್ ಸೋಂಕಿತರನ್ನು ಮಾನವೀಯತೆ ದೃಷ್ಟಿಯಿಂದ ನೋಡುವಲ್ಲಿ ಕಾನೂನಿನ ರಕ್ಷಣೆ ಇರುವ ಕುರಿತು ತಿಳಿಸಿದರು. ಯುವ ರೆಡ್ ಕ್ರಾಸ್ ಸಂಚಾಲಕರಾದ ಡಾ.ಪ್ರದೀಪ್ ರವರು ಈ ಕಾರ್ಯಕ್ರಮದ ಪ್ರಾಸ್ತಾವಿಕತೆಯ ಬಗ್ಗೆ ತಿಳಿಸಿದರು.

ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ಡಾ.ವಿ.ಪ್ರಸಾದ್ ಮತ್ತು ಪ್ರೋ..ಬಿ.ಕೆ.ಬಸವರಾಜ ಅವರು ಎನ್.ಎಸ್.ಎಸ್ ವತಿಯಿಂದ ಸಂಪನ್ಮೂಲ ವ್ಯಕ್ತಿಗಳು ಮತ್ತು ಮುಖ್ಯ ಅತಿಥಿಗಳನ್ನು ಸನ್ಮಾನಿಸಿದರು.

ರೆಡ್ ಕ್ರಾಸ್ ಸಭಾಪತಿ ಗಾಯಿತ್ರಿ ಶಿವರಾಮ್, ಉಪ ಸಭಾಪತಿ ಈ.ಅರುಣ್ ಕುಮಾರ್, ಕಾರ್ಯದರ್ಶಿ ಮಜಹರ್ ಉಲ್ಲಾ, ನಿರ್ದೇಶಕರಾದ ಶಿವರಾಮ್, ಎಸ್.ವಿ.ಗುರುಮೂರ್ತಿ, ಡಾ.ಮಧುಸೂದನ್ ರೆಡ್ಡಿ ಸೇರಿದಂತೆ ಮತ್ತಿತರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...