Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿ.ಕೆ.ಶಿವಕುಮಾರ್ ವಿರುದ್ದ ಕಾನೂನು ಕ್ರಮ ಜರುಗಿಸಿ : ಜೆಡಿಎಸ್ ಒತ್ತಾಯ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಚಿತ್ರದುರ್ಗ ಮಾ. 28 : ನಾವು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿಕೆ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ವಿರುದ್ದ ಕಾನೂನು ಕ್ರಮ ಕೈಗ್ಗೊಳುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾ ಜನತಾದಳ(ಜಾತ್ಯಾತೀತ)ದ ಜಿಲ್ಲಾ ಪರಿಶಿಷ್ಟ ಜಾತಿ ಘಟಕ ಜಿಲ್ಲಾಡಳಿತದ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಆಗ್ರಹಿಸಿದೆ.

ನವದೆಹಲಿಯಲ್ಲಿ ಇತ್ತೀಚೆಗೆ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್‍ರವರು ಸಂದರ್ಶನವೊಂದರಲ್ಲಿ ನಾವು ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾವಣೆ ಮಾಡಿ ಮತೀಯ ಅಧಾರಿತ ಮೀಸಲಾತಿಯನ್ನು ಜಾರಿಗೆ ತರುತ್ತೇವೆ ಎಂದು ಉದ್ದಟತನದ ಹೇಳಿಕೆಯನ್ನು ನೀಡಿರುತ್ತಾರೆ ಆದರೆ ಮತೀಯ ಆಧಾರಿತ ಮೀಸಲಾತಿ ಜಾರಿಗೆ ತರಲು ಸಂವಿಧಾನದಲ್ಲಿ ಅವಕಾಶ ಇಲ್ಲ, ಎಂಬುದು ತಿಳಿದಿರುವ ಅಂಶವಾಗಿದೆ. ಆದರೂ ಸಹಾ ಭಾರತ ಸಂವಿಧಾನಕ್ಕೆ ಅಪಮಾನ ಮಾಡುವ ರೀತಿಯಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆಯನ್ನು ಚಿತ್ರದುರ್ಗ ಜಿಲ್ಲಾ ಜಾತ್ಯಾತೀತ ಜನತಾದಳದ ಎಸ್.ಸಿ.ಘಟಕ ಸಹಿಸುವುದಿಲ್ಲ, ಇದರ ವಿರುದ್ದ ರಾಜ್ಯಾದ್ಯಂತ ಹೋರಾಟವನ್ನು ಮಾಡಲಾಗುವುದು. ಈ ಕೂಡಲೇ ಸಂವಿಧಾನ ವಿರೋಧಿ ಡಿ.ಕೆ.ಶಿವಕುಮಾರ್ ರವರ ವಿರುದ್ದ ಎಫ್.ಐ.ಆರ್. ದಾಖಲಿಸಿ ಕೂಡಲೇ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಜಾತ್ಯಾತೀತ ಜನತಾದಳದ ಎಸ್.ಸಿ.ಘಟಕದ ಅದ್ಯಕ್ಷರಾದ ಪರಮೇಶ್ವರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಣ್ಣ, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ್, ಚಿತ್ರದುರ್ಗ ತಾಲ್ಲೂಕು ಘಟಕದ ಅಧ್ಯಕ್ಷರಾದ ಸಣ್ಣ ತಿಮ್ಮಣ್ಣ, ಚಿದಾನಂದ ಸ್ವಾಮಿ, ಮಹಾಂತೇಶ್, ಕರಿಯಪ್ಪ, ರುದ್ರಪ್ಪ, ದುರುಗೇಶ್, ಮಾಲತೇಶ್, ಉಮಾಶಂಕರ್, ಹನುಮಂತರಾಯ್, ಬಸವರಾಜು, ನಾಗರಾಜು, ನರಸಿಂಹಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment