Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಂಬೇಡ್ಕರ್ ಜಯಂತಿ ಆಚರಿಸದ ಪಿಡಿಒ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ : ಕರುನಾಡ ವಿಜಯಸೇನೆ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.15 : ಹೊಳಲ್ಕೆರೆ ತಾಲ್ಲೂಕು ತೇಕಲವಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಜಯಂತಿಯನ್ನು ಆಚರಿಸದೆ ಅವಮಾನ ಮಾಡಿರುವ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮಂಜನಾಯ್ಕನ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ತೇಕಲವಟ್ಟಿ ಗ್ರಾಮಸ್ಥರು ಹಾಗೂ ಕರುನಾಡ ವಿಜಯಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಗ್ರಾಮ ಪಂಚಾಯಿತಿ ಪಿಡಿಓ. ಮಂಜನಾಯ್ಕನ ವಿರುದ್ದ ಧಿಕ್ಕಾರಗಳನ್ನು ಕೂಗಿ ಸೇವೆಯಿಂದ ಅಮಾನತ್ತುಗೊಳಿಸುವಂತೆ ಒತ್ತಾಯಿಸಿದರು.

 

ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಕಾರ್ಯಾಧ್ಯಕ್ಷ ಅಣ್ಣಪ್ಪ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಹಿರಿಯೂರು ತಾಲ್ಲೂಕು ಅಧ್ಯಕ್ಷ ತಿಪ್ಪೇಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಯರ್ರಿಸ್ವಾಮಿ, ತೇಕಲವಟ್ಟಿ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ್ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment