ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.15 : ಹೊಳಲ್ಕೆರೆ ತಾಲ್ಲೂಕು ತೇಕಲವಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಜಯಂತಿಯನ್ನು ಆಚರಿಸದೆ ಅವಮಾನ ಮಾಡಿರುವ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮಂಜನಾಯ್ಕನ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ತೇಕಲವಟ್ಟಿ ಗ್ರಾಮಸ್ಥರು ಹಾಗೂ ಕರುನಾಡ ವಿಜಯಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಗ್ರಾಮ ಪಂಚಾಯಿತಿ ಪಿಡಿಓ. ಮಂಜನಾಯ್ಕನ ವಿರುದ್ದ ಧಿಕ್ಕಾರಗಳನ್ನು ಕೂಗಿ ಸೇವೆಯಿಂದ ಅಮಾನತ್ತುಗೊಳಿಸುವಂತೆ ಒತ್ತಾಯಿಸಿದರು.
ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಕಾರ್ಯಾಧ್ಯಕ್ಷ ಅಣ್ಣಪ್ಪ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಹಿರಿಯೂರು ತಾಲ್ಲೂಕು ಅಧ್ಯಕ್ಷ ತಿಪ್ಪೇಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಯರ್ರಿಸ್ವಾಮಿ, ತೇಕಲವಟ್ಟಿ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ್ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್‌ಐಆರ್…