Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋವಿಡ್ ಹೊಸ ರೂಪಾಂತರಿ ನಿಯಂತ್ರಣಕ್ಕೆ ಕ್ರಮ: ಸಚಿವ ಡಾ.ಕೆ.ಸುಧಾಕರ್

Facebook
Twitter
Telegram
WhatsApp

 

ಬೆಂಗಳೂರು : ಕೋವಿಡ್ ನ ಹೊಸ ರೂಪಾಂತರಿ ಓಮಿಕ್ರಾನ್ ವೈರಾಣುವಿನ ಹರಡುವಿಕೆಗೆ ಸಂಬಂಧಿಸಿದಂತೆ ಎಲ್ಲ ಬಗೆಯ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಕೋವಿಡ್ ಲಸಿಕೆಯನ್ನು ಎಲ್ಲರೂ ಪಡೆಯುವುದರೊಂದಿಗೆ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದಕ್ಷಿಣ ಆಫ್ರಿಕಾ, ಬೋಟ್ಸ್ವಾನ, ಇಸ್ರೇಲ್, ಹಾಂಗ್ ಕಾಂಗ್ ಮೊದಲಾದ ದೇಶಗಳಲ್ಲಿ ಕಳೆದೊಂದು ವಾರದಿಂದ ಕೋವಿಡ್ ಹೊಸ ರೂಪಾಂತರಿ ವೈರಾಣು ಕಾಣಿಸಿದೆ. ಆದರೆ ರಾಜ್ಯದಲ್ಲಿ ಎಲ್ಲೂ ಇದು ಕಂಡುಬಂದಿಲ್ಲ. ಇದಕ್ಕಾಗಿ ನಿನ್ನೆ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮ ವಹಿಸಲು ಮಾರ್ಗಸೂಚಿ ರೂಪಿಸಿ ಬಿಡುಗಡೆ ಮಾಡಲಾಗಿದೆ. ಹೊಸ ವೈರಾಣು ಕಂಡುಬಂದಿರುವ ದೇಶಗಳಿಂದ ರಾಜ್ಯದ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಕೋವಿಡ್ ವರದಿ ತಂದಿದ್ದರೂ ಕೂಡ, ಅವರಿಗೆ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲಾಗುವುದು. ಅವರಿಗೆ ನೆಗೆಟಿವ್ ಬಂದರೆ ಮನೆಯಲ್ಲೇ ಒಂದು ವಾರ ಕಡ್ಡಾಯವಾಗಿ ಕ್ವಾರಂಟೈನ್ ಮಾಡಲಾಗುವುದು. ಈ ಸಮಯದಲ್ಲಿ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗುವುದು. ಏಳು ದಿನಗಳ ಬಳಿಕ ಮತ್ತೆ ಪರೀಕ್ಷೆ ಮಾಡಲಾಗುವುದು. ಅವರಿಗೆ ರೋಗದ ಲಕ್ಷಣ ಕಂಡುಬಂದರೆ ಆಸ್ಪತ್ರೆಗೆ ದಾಖಲಿಸಲಾಗುವುದು. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.

ವಿಮಾನ ನಿಲ್ದಾಣಗಳಲ್ಲಿ ಕ್ರಮ ವಹಿಸುವ ಬಗ್ಗೆ ಮಾರ್ಗಸೂಚಿ ನೀಡಲಾಗಿದೆ. ನಮ್ಮ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನೂ ಅಲ್ಲಿ ನಿಯೋಜಿಸಲಾಗಿದೆ. ಹೊಸ ವೈರಾಣು ಹರಡುವ ವೇಗ ಹೆಚ್ಚಿದೆ ಎಂದು ತಿಳಿದುಬಂದಿದೆ. ಆದರೆ ಇದ ತೀವ್ರತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದ್ದರಿಂದ ಹೆಚ್ಚು ಆತಂಕಪಡಬೇಕಿಲ್ಲ. ನಮ್ಮ ದೇಶದಲ್ಲಿ ಈ ರೀತಿಯ ಹೊಸ ವೈರಾಣು ಕಂಡುಬಂದಿಲ್ಲ. ಎಲ್ಲರೂ ಕೋವಿಡ್ ನ ಎರಡೂ ಡೋಸ್ ಗಳನ್ನು ಪಡೆಯಬೇಕು. ಕಡ್ಡಾಯವಾಗಿ ಕೋವಿಡ್ ಸುರಕ್ಷತಾ ಕ್ರಮಗಳನ್ನು ಜನರು ಅನುಸರಿಸಬೇಕು ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಸ್‍ಯುಸಿಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಯಿಂದ ವಿನೂತನ ಪ್ರಚಾರ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 :  ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ಹೋರಾಟಗಳನ್ನು ಕಟ್ಟುತ್ತಿರುವ ಪಕ್ಷ ಎಸ್‍ಯುಸಿಐ (ಕಮ್ಯುನಿಸ್ಟ್)ನ ಅಭ್ಯರ್ಥಿ  ಸುಜಾತ.ಡಿ ಅವರು ನಗರದಲ್ಲಿ ಇಂದು ವೋಟು ಕೊಡಿ ನೋಟು ಕೊಡಿ ಎಂದು ಜನರ

ಚಿತ್ರದುರ್ಗ | ಮನೆಯಿಂದ ಮತಚಲಾಯಿಸಿದ 3536 ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರು

ಚಿತ್ರದುರ್ಗ. ಏ.16: ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 13 ರಿಂದ 16 ವರೆಗೆ ಜರುಗಿದ ಮನೆಯಿಂದ ಮತದಾನ ಕಾರ್ಯ ಪೂರ್ಣಗೊಂಡಿದೆ. 85 ವರ್ಷ ಮೇಲ್ಪಟ್ಟ 2601 ನಾಗರಿಕರು

ಪಿಯುಸಿಯಲ್ಲಿ 2 ಬಾರಿ ಫೇಲ್.. ಯುಪಿಎಸ್ಸಿಯಲ್ಲಿ ಪಾಸ್.. ಕನ್ನಡದಲ್ಲೇ ಪರೀಕ್ಷೆ ಬರೆದ ಬಳ್ಳಾರಿಯ ಶಾಂತಪ್ಪ ಬಗ್ಗೆ ಇಲ್ಲಿದೆ ಮಾಹಿತಿ

ಬಳ್ಳಾರಿ: ಯುಪಿಎಸ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಅದರಲ್ಲಿ 1016 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಇದರಲ್ಲಿ ನಮ್ಮ ಕರ್ನಾಟಕದ ಶಾಂತಪ್ಪ ಜಡೆಮ್ಮನವರ್ ಕೂಡ ತೇರ್ಗಡೆಯಾಗಿದ್ದಾರೆ. ಶಾಂತಪ್ಪ ಮೂಲತಃ ಬಳ್ಳಾರಿಯವರು. ಕನ್ನಡದಲ್ಲಿಯೇ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿರುವುದು

error: Content is protected !!