Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಯಕನಹಟ್ಟಿ ಜಾತ್ರೆ: ಭಕ್ತಾಧಿಗಳಿಗೆ ಯಾವುದೇ ಕೊರತೆಯಾಗದಂತೆ ಕ್ರಮವಹಿಸಿ : ಸಚಿವ ಬಿ.ಶ್ರೀರಾಮುಲು

Facebook
Twitter
Telegram
WhatsApp

ಚಿತ್ರದುರ್ಗ, (ಮಾರ್ಚ್/01) : ಮಧ್ಯ ಕರ್ನಾಟಕದ ಪ್ರಸಿದ್ಧ ನಾಯಕನಹಟ್ಟಿ ಶ್ರೀಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ರೀತಿಯ ಮೂಲಸೌಕರ್ಯಗಳ ಕೊರತೆಯಾಗದಂತೆ ಅಗತ್ಯ ಕ್ರಮವಹಿಸಬೇಕು ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಶ್ರೀಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನದ ಒಳಮಠದ ಸಮುದಾಯ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 2022ನೇ ಸಾಲಿನ ಜಾತ್ರೆಯ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ನಾಯಕನಹಟ್ಟಿ ಶ್ರೀಗುರುತಿಪ್ಪೇರುದ್ರಸ್ವಾಮಿ ಮಹೋತ್ಸವವು ಮಾರ್ಚ್ 12 ರಿಂದ 20 ರವರೆಗೆ ನಡೆಯಲಿದ್ದು, ದೊಡ್ಡ ರಥೋತ್ಸವವು ಮಾರ್ಚ್ 20ರಂದು ನಿಗಧಿಯಾಗಿದೆ. ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಮೂಲಸೌಲಭ್ಯಗಳ ಕೊರತೆ ಎದುರಾಗಬಾರದು. ಕುಡಿಯುವ ನೀರು, ರಸ್ತೆ, ಆರೋಗ್ಯ, ನೈರ್ಮಲ್ಯ ಸೇರಿದಂತೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬಿಸಿಲು ಹೆಚ್ಚು ಇರುವ ಕಾರಣ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಶುದ್ಧ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ವಿವಿಸಾಗರದ ನೀರು, ಖಾಸಗಿಯವರಿಂದ ಹಾಗೂ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ಮಾಡಲು ಕ್ರಮವಹಿಸಬೇಕು.

ನಾಯಕನಹಟ್ಟಿ ಪಟ್ಟಣಕ್ಕೆ ಆಗಮಿಸುವ ಚಳ್ಳಕೆರೆ ರಸ್ತೆ, ಜಗಳೂರು ರಸ್ತೆ ಹಾಗೂ ಚಿತ್ರದುರ್ಗ ರಸ್ತೆ ಮಾರ್ಗ ಸೇರಿದಂತೆ ಎಲ್ಲ ರಸ್ತೆ ಮಾರ್ಗಗಳನ್ನು ದುರಸ್ತಿಗೊಳಿಸಬೇಕು ಎಂದು ತಿಳಿಸಿದರು.

ಕೋವಿಡ್ ನಿಯಮಾವಳಿ ಅನ್ವಯ ಜಾತ್ರೆಯನ್ನು ಆಚರಿಸಬೇಕಾಗಿದ್ದು ಜಾತ್ರಾ ಸಂದರ್ಭದಲ್ಲಿ ಸರ್ಕಾರ ನೀಡುವ ಮಾರ್ಗಸೂಚಿಯನ್ವಯ ನಡೆಸಲಾಗುತ್ತದೆ. ಈಗಿನ ಮಾರ್ಗಸೂಚಿಯನ್ವಯ ಜಾತ್ರೆಯನ್ನು ಎಸ್.ಓ.ಪಿ.ಅನ್ವಯ ಆಚರಣೆಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ಜಾತ್ರೆಗೆ ಆಗಮಿಸುವ ಭಕ್ತಾಧಿಗಳ ಓಡಾಟಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಿ, ಕೂಡಲೇ ವರದಿನೀಡಬೇಕು ಎಂದು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಸತೀಶ್‍ಬಾಬು ಅವರಿಗೆ ಸೂಚನೆ ನೀಡಿದರು.

ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಲ್ಲ ವಿದ್ಯುತ್ ಕಂಬಗಳಿಗೂ ವಿದ್ಯುತ್ ದೀಪಗಳ ಅಳವಡಿಕೆಗೆ ಕ್ರಮಕೈಗೊಳ್ಳಲಾಗಿದೆ. ಪಟ್ಟಣ ಪಂಚಾಯಿತಿ ವತಿಯಿಂದ ಯಾವುದೇ ವ್ಯತ್ಯಯವಾಗದಂತೆ ಬೀದಿದೀಪಗಳ ವ್ಯವಸ್ಥೆಗೆ ಕ್ರಮಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಸಭೆಗೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ವಿದ್ಯುತ್ ಸರಬರಾಜು ವ್ಯವಸ್ಥೆ ನಿರಂತರವಾಗಿರುವಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು.

ಪಾರ್ಕಿಂಗ್ ಸ್ಥಳಗಳ ಗುರುತಿಗೆ ಸೂಚನೆ: ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯು ದೇವಸ್ಥಾನದ ಸಮೀಪದಲ್ಲಿಯೇ ವ್ಯವಸ್ಥೆ ಮಾಡಬೇಕು. ಭಕ್ತಾಧಿಗಳಿಗೆ ಅನುಕೂಲವಾಗುವಂತೆ ಪಾರ್ಕಿಂಗ್ ಸ್ಥಳಗಳ ಗುರುತು ಮಾಡಿ ಮಾಹಿತಿ ನೀಡುವಂತೆ ಸಚಿವ ಬಿ.ಶ್ರೀರಾಮುಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದರು.

ದೇವಸ್ಥಾನದ ಸುತ್ತಮುತ್ತಲಿನ ಜಮೀನುಗಳ ಮಾಲೀಕರು ಸಹಕರಿಸಿ ಜಾಗ ಒದಗಿಸಿಕೊಟ್ಟರೆ ಪಾರ್ಕಿಂಗ್ ವ್ಯವಸ್ಥೆ ಮಾಡಲು ಸಾಧ್ಯವಾಗಲಿದೆ.  ಇದರಿಂದ ಭಕ್ತಾಧಿಗಳಿಗೆ ಅನುಕೂಲವಾಗಲಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದರು.

ಅಂಗಡಿ ಮಳಿಗೆಯಲ್ಲಿ ಎಸ್‍ಓಪಿ ಪಾಲನೆ ಕಡ್ಡಾಯ: ಅಂಗಡಿ ಮಳಿಗೆಗಳಲ್ಲಿ ಕಡ್ಡಾಯವಾಗಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚನೆ ನೀಡಿದರು.

ಕೋವಿಡ್-4ನೇ ಅಲೆಯು ಜೂನ್ ಮಾಹೆಯಲ್ಲಿ ಆರಂಭವಾಗಲಿದೆ ಎಂಬ ಮಾಹಿತಿ ಇದೆ. ಹಾಗಾಗಿ ಸುರಕ್ಷತೆಯಿಂದ ಇರಬೇಕು ಎಂದರು.

ಡಿಹೆಚ್‍ಓ ಡಾ.ಆರ್.ರಂಗನಾಥ್ ಮಾತನಾಡಿ, ಅಂಗಡಿ ಮಳಿಗೆ ಹಾಕುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಬೇಕು ಜೊತೆಗೆ ಕಡ್ಡಾಯವಾಗಿ ಎಸ್‍ಓಪಿ ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು.
ಕೋವಿಡ್‍ನಿಂದಾಗಿ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ ಅಂಗಡಿ ಮಳಿಗೆಗಳನ್ನು ಪಟ್ಟಣ ಪಂಚಾಯಿತಿ ಅವರು ಕಡಿಮೆ ದರದಲ್ಲಿ ಹರಾಜು ಮಾಡಬೇಕು ಎಂದು ಸಚಿವ ಬಿ.ಶ್ರೀರಾಮುಲು ಸಲಹೆ ನೀಡಿದರು.

ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಅವರ ಬೇಡಿಕೆಗೆ ತಕ್ಕಂತೆ ಅಗತ್ಯ ಬಸ್ ಸೌಲಭ್ಯಗಳನ್ನು ಒದಗಿಸಬೇಕು ಎಂದು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಸಚಿವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ತಹಶೀಲ್ದಾರ್ ಎನ್.ರಘುಮೂರ್ತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

error: Content is protected !!