ಮಳೆಯಿಂದಾಗುವ ಅನಾಹುತ ತಪ್ಪಿಸಲು ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚನೆ

1 Min Read

 

ಬೆಂಗಳೂರು: ಸತತ ಸುರಿದ ಮಳೆಯಿಂದಾಗಿ ಸಿಲಿಕಾನ್ ಸಿಟಿಯಲ್ಲಿ ಜನರ ಸ್ಥಿತಿ ಅಸ್ತವ್ಯಸ್ತವಾಗಿದೆ. ಕೆಲವೆಡೆ ಮನೆಗಳಿಗೆಲ್ಲಾ ನೀರು ತುಂಬಿ ದಿನದ ಬದುಕು ನಡೆಸೋದಕ್ಕೂ ಕಷ್ಟವಾಗಿದೆ. ಈಗಾಗಲೇ ಸಿಎಂ ಬಸವರಾಜ್ ಬೊಮ್ಮಾಯಿ‌ ಅವರು ಕೂಡ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲೇ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್ ಸಭೆ ನಡೆಸಿ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಮಳೆಗಾಲದ ವೇಳೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಈ ಸಂಬಂಧ ಎಲ್ಲಾ ಅಧಿಕಾರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಮಳೆಗಾಲದಲ್ಲಿ ರಾಜಕಾಲುವೆ, ರಸ್ತೆ ಬದಿಯ ಚರಂಡಿಗಳು, ಶೋಲ್ಡರ್ ಡ್ರೈನ್‌ಗಳಲ್ಲಿ ತುಂಬಿರುವ ಹೂಳನ್ನು ತೆರವುಗೊಳಿಸಿ ಸರಾಗವಾಗಿ ನೀರು ಹರಿದುಹೋಗುವಂತೆ ಮಾಡಬೇಕು. ರಸ್ತೆಗಳಲ್ಲಿ ಅಗೆದು ಬಿಟ್ಟಿರುವ ಮಣ್ಣು ನೀರುಗಾಲುವೆಗಳಿಗೆ ಸೇರದಂತೆ ಕೂಡಲೆ ತೆರುವಗೊಳಿಸುವ ಕೆಲಸ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಬೆಸ್ಕಾಂ, ಜಲಮಂಡಳಿ ಇಲಾಖೆಯು ರಸ್ತೆ ಕತ್ತರಿಸಬೇಕಾದರೆ ಕಡ್ಡಾಯವಾಗಿ ಪಾಲಿಕೆಯಿಂದ ಅನುಮತಿಪಡೆಯಬೇಕು ಹಾಗೂ ರಸ್ತೆ ಕತ್ತರಿಸಿದ ಭಾಗವನ್ನು ಸಂಬಂಧಪಟ್ಟ ಇಲಾಖೆಗಳೇ ತ್ವರಿತವಾಗಿ ಪುನಶ್ಚೇತನ ಕಾರ್ಯ ಮಾಡಬೇಕು. ಪುನಶ್ಚೇತನ ಮಾಡಿರುವ ಬಗ್ಗೆ ಪಾಲಿಕೆಯ ಅಧಿಕಾರಿಗಳು ಪ್ರಮಾಣಿಕರಿಸಬೇಕು. ಎಲ್ಲಾ ವಾರ್ಡ್ಗಳಲ್ಲಿಯೂ ಆದ್ಯತೆ ಮೇರೆಗೆ ತುರ್ತು ಕಾಮಗಾರಿಗಳನ್ನು ಕೈಗೆತ್ತಿಕೋಲ್ಳುವಂತೆ ಸೂಚಿಸಿದ ಆಡಳಿತಗಾರರು ಆಯಾ ವಲಯ ಮುಖ್ಯ ಇಂಜಿನಿಯರ್‌ಗಳು ಯಾವ್ಯಾವ ಕಾಮಗಾರಿಗಳು ನಡೆಯುತ್ತಿರುವ ಬಗ್ಗೆ ಮೇಲ್ವಿಚಾರಣೆ ಮಾಡಬೇಕು ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *