Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಶೇಷ ಸ್ವೀಪ್ ಚಟುವಟಿಕೆ ಮೂಲಕ ಮತದಾನ ಪ್ರಮಾಣ ಹೆಚ್ಚಳಕ್ಕೆ ಕ್ರಮವಹಿಸಿ : ಆರ್.ಚಂದ್ರಯ್ಯ

Facebook
Twitter
Telegram
WhatsApp

 

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಏ.11) :  ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾದ ಮತಗಟ್ಟೆಗಳಲ್ಲಿ ಈ ಬಾರಿ ಹೆಚ್ಚು ಮತದಾನವಾಗಲು ವಿಶೇಷ ಸ್ವೀಪ್ ಚಟುವಟಿಕೆಗಳನ್ನು ಮಾಡುವ ಮೂಲಕ ಮತದಾನ ಪ್ರಮಾಣ ಹೆಚ್ಚಳವಾಗುವಂತೆ ಅಗತ್ಯ ಕ್ರಮವಹಿಸಬೇಕು ಎಂದು ಉಪವಿಭಾಗಾಧಿಕಾರಿ ಹಾಗೂ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಆರ್.ಚಂದ್ರಯ್ಯ ಹೇಳಿದರು.

ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಲೆಕ್ಕ ಸಹಾಯಕರು, ತಾಂತ್ರಿಕ ಸಹಾಯಕರು, ಡಾಟಾ ಎಂಟ್ರಿ ಆಪರೇಟರ್‍ಗಳಿಗೆ ಚುನಾವಣಾ ನೀತಿ ಸಂಹಿತೆ ಪಾಲನೆ ಮತ್ತು ಶೇಕಡಾವಾರು ಮತದಾನದ ಪ್ರಮಾಣ ಹೆಚ್ಚಿಸಲು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮತಗಟ್ಟೆಗಳಲ್ಲಿ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳು ಇರುವಂತೆ ಕ್ರಮವಹಿಸಬೇಕು. ಮಾದರಿ ನೀತಿ ಸಂಹಿತೆಗೆ ಸಂಬಂಧಪಟ್ಟಂತೆ ಯಾವುದೇ ಬ್ಯಾನರ್, ಕಟೌಟ್‍ಗಳು ತೆರವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು. ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಮಾದರಿ ನೀತಿ ಸಂಹಿತೆಯನ್ನು ಪಾಲಿಸುವಂತೆ ನಿಗಾವಹಿಸುವ ಸಂಪೂರ್ಣ ಜವಾಬ್ದಾರಿ ಆಯಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳದ್ದಾಗಿರುತ್ತದೆ ಎಂದರು.

ಯಾವುದಾದರೂ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಪ್ಲೈಯಿಂಗ್ ಸ್ಕ್ವಾಡ್ ತಂಡಕ್ಕೆ ಮಾಹಿತಿ ನೀಡಬೇಕು. ಸಾರ್ವಜನಿಕರಿಗೆ ಸಿ-ವಿಜಿಲ್ ಆ್ಯಪ್ ಬಗ್ಗೆ ಮಾಹಿತಿ ನೀಡಿ ಈ ಮಾಹಿತಿಯಂತೆ ದೂರನ್ನು ಪರಿಶೀಲಿಸಿ ಕ್ರಮವಹಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಕ್‍ಪೋಸ್ಟ್‍ಗಳಿಗೆ ಆಗಾಗ್ಗೆ ಭೇಟಿ ನೀಡಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲ್ಲೂಕು ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಹೆಚ್.ಹನುಮಂತಪ್ಪ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ಆರ್.ಚೈತ್ರಾ, ಪಿ.ಟಿ.ಧನಂಜಯ ಸೇರಿದಂತೆ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಲೆಕ್ಕ ಸಹಾಯಕರು, ತಾಂತ್ರಿಕ ಸಹಾಯಕರು, ಡಾಟಾ ಎಂಟ್ರಿ ಆಪರೇಟರ್‍ಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಭೇಟಿ | ಬಿ. ಫಾರಂಗೆ ಪೂಜೆ ಸಲ್ಲಿಸಿ ಪ್ರಚಾರ ಪ್ರಾರಂಭ

ಸುದ್ದಿಒನ್, ಚಿತ್ರದುರ್ಗ, ಮಾ.29: ದೇವರು ಮತ್ತು ಜನರ ಮೇಲೆ ನಂಬಿಕೆ ಹೊಂದಿದ ವ್ಯಕ್ತಿ ಎಂದೂ ಸಂಕಷ್ಟಕ್ಕೆ ಸಿಲುಕಿದ ಉದಾಹರಣೆ ಇಲ್ಲ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಹೇಳಿದರು.

ಗೋ ಬ್ಯಾಕ್ ಗೋವಿಂದ ಕಾರಜೋಳ | ಬಿಜೆಪಿ ಅಭ್ಯರ್ಥಿಗೆ ಚಿತ್ರದುರ್ಗದಲ್ಲಿ ತಟ್ಟಿದ ಬಂಡಾಯದ ಬಿಸಿ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29  : ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಬಂಡಾಯದ ಬಿಸಿ ತಟ್ಟಿದೆ. ಟಿಜೆಟ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದರು. ಆದರೆ ಇದೆ ವೇಳೆ ಟಿಕೆಟ್

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

error: Content is protected !!