Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಳಕು ಕಳ್ಳತನ ಪ್ರಕರಣ: ಆರೋಪಿ ಬಂಧನ, ₹6 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 17 : ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಪೊಲೀಸ್ ಠಾಣೆ ವ್ಯಾಪ್ತಿಯ ಗಿರಿಯಮ್ಮನಹಳ್ಳಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು‌ ತಳಕು ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹೊಳೇಹೊನ್ನೂರು ಗ್ರಾಮದ ಮೈಲಾರಿ ಬಂಧಿತ ಆರೋಪಿ.
ಘಟನೆ ಹಿನ್ನೆಲೆ : ತಳಕು ಪೊಲೀಸ್ ಠಾಣೆ ವ್ಯಾಪ್ತಿಯ ಗಿರಿಯಮ್ಮನಹಳ್ಳಿಯಲ್ಲಿ ಶಾರದಮ್ಮ ನವರ ಮನೆಯಲ್ಲಿ ಸೆಪ್ಟೆಂಬರ್ 30 ರಂದು ಮನೆಯ ಬೀಗವನ್ನು ಮುರಿದು ಮನೆಯ ಒಳಗಿದ್ದ ಬೀರುವಿನಲ್ಲಿಟ್ಟಿದ್ದ 35 ಗ್ರಾಂ ತೂಕದ ಬಂಗಾರದ ಒಡವೆಗಳು ಮತ್ತು 500ಗ್ರಾಂ ತೂಕದ ಬೆಳ್ಳಿ ಆಭರಣಗಳನ್ನು ಮತ್ತು 80,000 ನಗದು ಹಣವನ್ನು ಕಳುವು ಮಾಡಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾರದಮ್ಮನವರು ತಳಕು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ದೂರಿನನ್ವಯ ಆರೋಪಿಯನ್ನು ಪತ್ತೆ ಮಾಡಲು ಪೊಲೀಸ್ ಅಧೀಕ್ಷಕರಾದ ಕುಶಾಲ್ ಚೌಕ್ಸೆ ಐ.ಪಿ.ಎಸ್., ಚಿತ್ರದುರ್ಗ ಜಿಲ್ಲೆ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ.ಆರ್. ಶಿವಕುಮಾರ್ ರವರ ಮಾರ್ಗದರ್ಶನದಲ್ಲಿ ಸತ್ಯನಾರಾಯಣರಾವ್, ಪೊಲೀಸ್ ಉಪಾಧೀಕ್ಷಕರು ಚಳ್ಳಕೆರೆ ಉಪವಿಭಾಗ ಹಾಗೂ ತಳಕು ವೃತ್ತ ನಿರೀಕ್ಷಕರಾದ ಹನುಮಂತಪ್ಪ ಎಂ ಶಿರೀಹಳ್ಳಿ ರವರ ನಿರ್ದೇಶನದಲ್ಲಿ ಶಿವಕುಮಾರ್ ಪಿಎಸ್‌ಐ, ಹಾಗೂ ಸಿಬ್ಬಂದಿಗಳಾದ ನಿತಿನ್ ಕುಮಾರ್, ನಾಗರಾಜಪ್ಪ, ಆರ್ ರಂಗಸ್ವಾಮಿ, ಮಂಜುನಾಥ, ಪುರುಷೋತ್ತಮ್, ಯರಬಾಳು ಬಸವರಾಜ, ಶ್ರೀಧರ, ರವರುಗಳನ್ನೊಳಗೊಂಡ ತಂಡವನ್ನು ರಚಿಸಿದ್ದು ಹಾಗೂ ಆರೋಪಿತರ ಪತ್ತೆಗೆ ಬೆರಳು ಮುದ್ರೆ ಘಟಕದ ನಿರೀಕ್ಷಕರಾದ ವಿಶ್ವನಾಥ ಕೆ.ಎನ್, ಸಿಬ್ಬಂದಿಯವರಾದ ಚೇತನ್ ಕುಮಾರ್, ಮಂಜುನಾಥ ರವರ ನೆರವಿನೊಂದಿಗೆ ಆರೋಪಿ ಮೈಲಾರಿಯನ್ನು ಬಂಧಿಸಿರುತ್ತಾರೆ. ಆರೋಪಿತನು ತಳಕು, ಮೊಳಕಾಲ್ಮರು ಮತ್ತು ಹೊಸದುರ್ಗ ಸರಹದ್ದಿನಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಆರೋಪಿತನಿಂದ 6,00,000/- ರೂ ಮೌಲ್ಯದ ಸುಮಾರು 37 ಗ್ರಾಂ ತೂಕದ ಬಂಗಾರದ ಒಡವೆಗಳು ಮತ್ತು 450 ಗ್ರಾಂ ತೂಕದ ಬೆಳ್ಳಿ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಮುಂದಿನ ಕ್ರಮಕ್ಕಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಾರ್ಯಾಚರಣೆ ನಡೆಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯವರ ಕಾರ್ಯವನ್ನು ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now