Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರತಿಭಾ ಪುರಸ್ಕಾರ : ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ

---Advertisement---

ಸುದ್ದಿಒನ್, ಹಿರಿಯೂರು, ಜುಲೈ. 11 : ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 85 ಕ್ಕಿಂತ ಹೆಚ್ಚು ಅಂಕ ಪಡೆದ ತಾಲೂಕಿನ ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ. ಕಂದಿಕೆರೆ ಜಗದೀಶ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಜೆರಾಕ್ಸ್ ಹಾಗೂ ಭಾವಚಿತ್ರದೊಂದಿಗೆ ಶ್ರೀ ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ ಅರ್ಜಿ ಭರ್ತಿ ಮಾಡಿ ಕಛೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನಾಂಕವಾಗಿದೆ. ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ದಿನಾಂಕ ಶೀಘ್ರದಲ್ಲೇ ತಿಳಿಸಲಾಗುವುದು. ಎಲ್ಲಾ ಸಮುದಾಯಗಳ ಅರ್ಹ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಯನ್ನು ಕಛೇರಿಯಲ್ಲಿ ಪಡೆಯಬಹುದು. ಅಂದಿನ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಶ್ರೀ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಂದಿಕೆರೆ ಜಗದೀಶ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಬ್ಯಾoಕ್ ನ ನಿರ್ದೇಶಕ ಮಲ್ಲಪ್ಪನಹಳ್ಳಿ ಮಹಾಲಿಂಗಯ್ಯ, ಮನ್ಮಥ, ಶಾಂತರಾಜಯ್ಯ, ಆರ್ ಗೌಡ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...