Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರತಿಭಾ ಪುರಸ್ಕಾರ : ಮುಸ್ಲಿಂ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ.20 : ಹತ್ತನೆ ತರಗತಿ ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ 2024-25 ನೇ ಸಾಲಿನಲ್ಲಿ ಶೇ.85 ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಜಿಲ್ಲೆಯ ಮುಸ್ಲಿಂ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲು ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ದಿ ಸಂಘ ಜಿಲ್ಲಾ ಶಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಜುಲೈ 26 ರಂದು ಅಹ್ಮದ್ ಪ್ಯಾಲೇಸ್‍ನಲ್ಲಿ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದ್ದು, ಅರ್ಹ ವಿದ್ಯಾರ್ಥಿಗಳು ಆಧಾರ್ ಕಾರ್ಡ್, ಅಂಕಪಟ್ಟಿ ನಕಲು, ಒಂದು ಪಾಸ್‍ಪೋರ್ಟ್ ಫೋಟೋ, ಸ್ವವಿವರದೊಂದಿಗೆ ಜು.23 ನೇ ತಾರೀಖಿನೊಳಗೆ ಅಧ್ಯಕ್ಷರು, ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ದಿ ಸಂಘ ಜಿಲ್ಲಾ ಶಾಖೆ, ಜೋಗಿಮಟ್ಟಿ ರಸ್ತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಹತ್ತಿರ, ಚಿತ್ರದುರ್ಗ ಇಲ್ಲಿಗೆ ಅಂಚೆ ಮೂಲಕ ಇಲ್ಲವೇ ಖುದ್ದಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ : 8497863957 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಎಕ್ಬಾಲ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...