Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಪ್ರತಿಭಾ ಪುರಸ್ಕಾರ ಮಕ್ಕಳ ಉತ್ತಮ ಸಾಧನೆಗೆ ಸಹಕಾರಿ : ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 02 : ಸಹನೆ, ಸಹಕಾರ, ತ್ಯಾಗದ ಮೂಲಕ ಒತ್ತಡದ ಜೀವನದಿಂದ ಹೊರ ಬರಲು ಸಾಧ್ಯ ಎಂದು ಆರ್ಥಿಕ ಚಿಂತಕ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ ತಿಳಿಸಿದರು.

ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಪ್ರತಿಭಾ ಪುರಸ್ಕಾರದಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ಕಾರಿ ನೌಕರರು ಕೆಲಸದಿಂದ ನಿವೃತ್ತರಾಗಿರಬಹುದು. ಆದರೆ ಪ್ರವತ್ತಿಯಿಂದ ಅಲ್ಲ. ಪ್ರತಿಭೆಗಳನ್ನು ಗೌರವಿಸುವ ಮೂಲಕ ವಿದ್ಯಾರ್ಥಿಗಳಿಗೆ ಇನ್ನು ಪ್ರೋತ್ಸಾಹ ನೀಡಿದಂತಾಗುತ್ತದೆ. ಹೆಚ್ಚಿನ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳನ್ನು ಪುರಸ್ಕರಿಸುವುದಿಂದ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಹಕಾರಿಯಾಗಲಿದೆ. ಒಳ್ಳೆಯ ಹೃದಯವಿದ್ದವರು ದೀರ್ಘಾಯುಷಿಗಳಾಗಿರುತ್ತಾರೆ. ಮಾನಸಿಕ ಹಾಗೂ ದೈಹಿಕವಾಗಿ ಆರೋಗ್ಯವಾಗಿರಬೇಕಾದರೆ ಭಾವನಾತ್ಮಕ ಬದುಕು ಮುಖ್ಯ ಎಂದು ಹೇಳಿದರು.

ಆಧುನಿಕ ಯುಗದಲ್ಲಿ ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ. ಸಹನೆ, ಸಹಿಸಿಕೊಳ್ಳುವ ಗುಣ ದೊಡ್ಡ ಶಕ್ತಿಯಿದ್ದಂತೆ. ಧ್ಯಾನ, ಮಿತವಾದ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ನಿವೃತ್ತರು ಒಂದಲ್ಲ ಒಂದು ರೀತಿಯ ಚಟುವಟಿಕೆಯಲ್ಲಿ ತೊಡಗಿಕೊಂಡಾಗ ಲವಲವಿಕೆಯಿಂದ ಇರಬಹುದಲ್ಲದೆ ತಲ್ಲಣಗೊಂಡಿರುವ ಮನಸ್ಸುಗಳನ್ನು ಹತೋಟಿಯಲ್ಲಿಟ್ಟುಕೊಳ್ಳಬಹುದು. ಸ್ಥಿತ ಪ್ರಜ್ಞೆ ಬೆಳೆಸಿಕೊಂಡು ಸುತ್ತಮುತ್ತಲಿನ ವಾತಾವರಣವನ್ನು ತಣ್ಣಗಾಗಿಸಿಕೊಂಡು ಹಿರಿಯರ ಸಲಹೆ ಮಾರ್ಗದರ್ಶನಗಳನ್ನು ಪಡೆದುಕೊಂಡಾಗ ಸಂಘಟನೆ ಬಲಿಷ್ಟವಾಗಿರುತ್ತದೆಂದರು.

ಸರ್ಕಾರಿ ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷ ಪ್ರೇಮನಾಥ್ ಮಾತನಾಡಿ ಸಂಘದ ಬೆಳವಣಿಗೆ ಹಿಂದೆ ನಿವೃತ್ತ ನೌಕರರ ಸಹಕಾರವಿದೆ. ಎಲ್ಲರ ದೇಣಿಗೆಯಿಂದ ಕಟ್ಟಡ ನಿರ್ಮಾಣವಾಗಿದೆ. ದಿನನಿತ್ಯವೂ ನಗರವನ್ನು ಶುಚಿಗೊಳಿಸುವ ಹತ್ತು ಪೌರ ಕಾರ್ಮಿಕರಿಗೆ ಮುಂದಿನ ದಿನಗಳಲ್ಲಿ ಸನ್ಮಾನ ಮಾಡಲಾಗುವುದು. ಸಂಘದಲ್ಲಿ ಮನೋರಂಜನಾ ಕೇಂದ್ರವಿದೆ. ನಿವೃತ್ತ ನೌಕರರು ಆರಾಮವಾಗಿ ಕಾಲ ಕಳೆಯಬಹುದು. ಪ್ರತಿಭಾ ಪುರಸ್ಕಾರಕ್ಕೆ ಒಳಗಾಗಿರುವ ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೆ ಹೋದ ಮೇಲೆ ಹೆತ್ತವರನ್ನು ಕೈಬಿಡದೆ ಪೋಷಿಸುವಂತೆ ಮನವಿ ಮಾಡಿದರು.

ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ತಿಮ್ಮಯ್ಯ ಮಾತನಾಡಿ ಮಧ್ಯಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಇದಕ್ಕೆ ಹಿರಿಯರು ಕೈಜೋಡಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಜಾಸ್ತಿಯಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಫಲಿತಾಂಶ ಕುಂಠಿತವಾಗಿದೆ. ನಿವೃತ್ತ ನೌಕರರ ಮಾರ್ಗದರ್ಶನ ಬೇಕು ಎಂದು ಮನವಿ ಮಾಡಿದರು.

ನಿವೃತ್ತ ಸರ್ಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ರಂಗಪ್ಪರೆಡ್ಡಿ, ಗೌರವಾಧ್ಯಕ್ಷ ವೈ.ಚಂದ್ರಶೇಖರಯ್ಯ, ಉಪಾಧ್ಯಕ್ಷರುಗಳಾದ ಮಂಜುನಾಥ್, ಎಫ್.ಆರ್.ಅಲಗೇರಿ,
ಪ್ರಧಾನ ಕಾರ್ಯದರ್ಶಿ ತಿಮ್ಮಪ್ಪ, ಖಜಾಂಚಿ ಎನ್.ಆರ್.ಬೈಯಣ್ಣ, ಕಾರ್ಯಾಧ್ಯಕ್ಷ ಎಂ.ಶಿವಾನಂದಪ್ಪ ಇವರುಗಳು ವೇದಿಕೆಯಲ್ಲಿದ್ದರು. ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

 

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...