Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಸಾರ್ವತ್ರಿಕ ಚುನಾವಣೆ: ಕರಡು ಮತದಾರರ ಪಟ್ಟಿ ಪ್ರಕಟ

---Advertisement---

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜೂನ್. 23): ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2023 ಕುರಿತು ಮತದಾರರ ಪಟ್ಟಿ ಸಂಬಂಧ ರಾಜ್ಯ ಚುನಾವಣಾ ಆಯೋಗವು ವೇಳಾಪಟ್ಟಿ ನಿಗಧಿಪಡಿಸಿದ್ದು, ಶುಕ್ರವಾರ ಕರಡು ಮತದಾರರ ಪಟ್ಟಿ ಪ್ರಕಟಿಸಿದೆ.

ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ಜುಲೈ 04  ಮಂಗಳವಾರ ಕೊನೆಯ ದಿನವಾಗಿರುತ್ತದೆ. ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಜುಲೈ 07 ಶುಕ್ರವಾರ ಕೊನೆಯ ದಿನ. ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿದ ನಂತರ ಮುದ್ರಕರಿಂದ ಅಗತ್ಯ ಬದಲಾವಣೆಯನ್ನು ಮಾಡಿಸಿ ಅಂತಿಮ ಚೆಕ್‍ಲೀಸ್ಟ್ ಪಡೆದುಕೊಂಡು ಜುಲೈ 12ರಂದು ಬುಧವಾರ ಕ್ಷೇತ್ರದ ವ್ಯಾಪ್ತಿಯಲ್ಲಿ ಮತ್ತೊಮ್ಮೆ ಪರಿಶೀಲಿಸಲಾಗುವುದು. ಅಂತಿಮ ಮತದಾರರ ಪಟ್ಟಿ ಪ್ರಕಟಣೆ ದಿನಾಂಕವನ್ನು ಮುಂದೆ ತಿಳಿಸಲಾಗುವುದು.

ರಾಜ್ಯ ಚುನಾವಣಾ ಆಯೋಗದ ಸುತ್ತೋಲೆಯನ್ವಯ ಕರಡು ಮತದಾರರ ಪಟ್ಟಿಯನ್ನು ಮತಕ್ಷೇತ್ರದ ಮತಗಟ್ಟೆಗಳು, ಗ್ರಾ.ಪಂ. ಕಚೇರಿ, ತಾ.ಪಂ. ಕಚೇರಿ, ತಹಸಿಲ್ದಾರರ ಕಚೇರಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿಗದಿತ ಸ್ಥಳಗಳಲ್ಲಿ ಜೂನ್ 23 ರಂದು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment