Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

Facebook
Twitter
Telegram
WhatsApp

 

 

ಚಿತ್ರದುರ್ಗ,(ಸೆಪ್ಟಂಬರ್. 03) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲ್ಲೂಕು ಪಂಚಾಯತ್‍ಗಳ ಮತ್ತು ವಿವಿಧ ಕ್ರೀಡಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ 2022-23ನೇ ಸಾಲಿನ ಚಿತ್ರದುರ್ಗ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟಂಬರ್ 05ರಂದು  ಏರ್ಪಡಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಚಿತ್ರದುರ್ಗ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟಂಬರ್ 10ರಂದು  ಜಿಲ್ಲಾ  ಕ್ರೀಡಾಂಗಣ ಚಿತ್ರದುರ್ಗದಲ್ಲಿ ಏರ್ಪಡಿಸಲಾಗಿದೆ.

ಸೆಪ್ಟಂಬರ್ 4ರಂದು  ಹಿರಿಯೂರು ತಾಲ್ಲೂಕುಮಟ್ಟದ ದಸರಾ ಕ್ರೀಡಾಕೂಟ ಹಿರಿಯೂರು ತಾಲ್ಲೂಕು ಕ್ರೀಡಾಂಗಣದಲ್ಲಿ ಹಾಗೂ ಚಳ್ಳಕೆರೆ ತಾಲ್ಲೂಕುಮಟ್ಟದ ದಸರಾ ಕ್ರೀಡಾಕೂಟ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯ ಶ್ರೀ ಗುರುತಿಪ್ಪೇರುದ್ರ ಸ್ವಾಮಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಸೆಪ್ಟಂಬರ್ 6ರಂದು ಹೊಸದುರ್ಗ ತಾಲ್ಲೂಕುಮಟ್ಟದ ದಸರಾ ಕ್ರೀಡಾಕೂಟ ಹೊಸದುರ್ಗ ತಾಲ್ಲೂಕು ಕ್ರೀಡಾಂಗಣದಲ್ಲಿ, ಸೆಪ್ಟಂಬರ್ 10ರಂದು ಚಿತ್ರದುರ್ಗ ತಾಲ್ಲೂಕುಮಟ್ಟದ ದಸರಾ ಕ್ರೀಡಾಕೂಟವು ಚಿತ್ರದುರ್ಗ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಖೋಖೋ, ಕಬ್ಬಡಿ, ಫುಟ್‍ಬಾಲ್, ಥ್ರೋಬಾಲ್ ಕ್ರೀಡಾ ಕೂಟವನ್ನು ಆಯೋಜಿಸಲಾಗಿದೆ.

ಅಥ್ಲೆಟಿಕ್ಸ್ ಸ್ಪರ್ಧೆಗಳ ವಿವರ: (ಪುರುಷರಿಗೆ) 100ಮೀ, 200ಮೀ, 400ಮೀ, 800ಮೀ, 1500ಮೀ: 5000 ಮೀ. ಓಟ, ಮತ್ತು ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ, ಗುಂಡು ಎಸೆತ, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ. 110 ಮೀ. ಹರ್ಡಲ್ಸ್, 4*100ಮೀ ರಿಲೇ, 4*400 ರಿಲೇ.
ಮಹಿಳೆಯರಿಗೆ. 100ಮೀ. 200ಮೀ, 400ಮೀ, 1500ಮೀ 3000 ಓಟ, ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ, ಗುಂಡು ಎಸೆತ, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4*100ಮೀ. ರಿಲೇ, 4*400 ರಿಲೇ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 9611673475 ಹಾಗೂ  ವಾಲಿಬಾಲ್ ತರಬೇತುದಾರ ಮಹಮ್ಮದ್ ಮುಹೀಬುಲ್ಲಾ ಅವರನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಹಾರಾಷ್ಟ್ರದಲ್ಲಿ ಯಾರಾಗಲಿದ್ದಾರೆ ನೂತನ ಸಿಎಂ ?

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಗಾದರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಪ್ರತಿಕ್ರಿಯಿಸಿದ್ದಾರೆ. ದೇವೇಂದ್ರ ಫಡ್ನವೀಸ್

ಸಿಎಂ ಸಿದ್ದರಾಮಯ್ಯ ಅವರ ಪ್ರಚಾರದಿಂದ ಗೆಲುವು : ಬಿಜೆಪಿ ಸೋಲಿನ ಬಗ್ಗೆ ಜನಾರ್ದನ ರೆಡ್ಡಿ ಫಸ್ಟ್ ರಿಯಾಕ್ಷನ್

ಬಳ್ಳಾರಿ: ಇಂದು ಸಂಡೂರು ವಿಧಾನಸಭಾ ಕ್ಷೇತ್ರದಲ್ಲೂ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪುರ್ಣ ತುಕರಾಂ ಗೆಲುವು ಸಾಧಿಸಿದ್ದಾರೆ. ಸಂಜೆ ವೇಳೆಗೆ ಅಧಿಕೃತ ಅನೌನ್ಸ್ ಆಗಲಿದೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದಕ್ಕಾಗಿ ಜನಾರ್ದನ ರೆಡ್ಡಿ ಅವರು ಸಾಕಷ್ಟು

ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿ ಮತ್ತೊಮ್ಮೆ ಅಧಿಕಾರಕ್ಕೆ…!

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿ ದೊಡ್ಡ ಅಬ್ಬರವನ್ನೇ ಸೃಷ್ಟಿಸಿದೆ. ದ್ವಿಶತಕದ ಸೀಟುಗಳನ್ನು ದಾಟಿ ದಾಖಲೆ ಸೃಷ್ಟಿಸಿದ್ದಾರೆ. ಮಹಾಯುತಿ ಈಗಾಗಲೇ 220 ಸ್ಥಾನಗಳಲ್ಲಿ ಮುನ್ನಡೆಯಲ್ಲಿ ಮುಂದುವರಿದಿದೆ. ಏತನ್ಮಧ್ಯೆ, ಮಹಾವಿಕಾಸ್ ಅಘಾಡಿ 53 ಸ್ಥಾನಗಳಲ್ಲಿ ಮುನ್ನಡೆ

error: Content is protected !!