ಚೆನ್ನೈ: ತಮಿಳಿನ ನಟ, ನಿರ್ದೇಶಕ ವಿಜಯ್ ಆಂಟೋನಿ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಳ್ವಾರಪೇಟೆಯಲ್ಲಿರುವ ತಮ್ಮನಿವಾಸದಲ್ಲಿಯೇ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೀರಾ ಆತ್ಮಹತ್ಯೆ ಮಾಡಿಕೊಂಡ ಯುವತಿ.
ಮೀರಾಳನ್ನು ನೇಣು ಬಿಗಿದ ಸ್ಥಿತಿಯಲ್ಲಿ ನೋಡಿದ ಕೂಡಲೇ, ಮನೆಯವರು ಆಕೆಯನ್ನು ಕರೆದುಕೊಂಡು ಆಸ್ಪತ್ರೆಗೆ ಸೇರಿಸಿದ್ದರು. ಅಷ್ಟರಲ್ಲಾಗಲೇ ಮೀರಾಳ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಮೀರಾ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ.

ಚೆನ್ನೈನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಮೀರಾ ಸೆಕೆಂಡ್ ಪಿಯುಸಿ ವಿಧ್ಯಾಭ್ಯಾಸ ಮಾಡುತ್ತಿದ್ದಳು. ವಯಸ್ಸಿನ್ನು ಕೇವಲ 16 ವರ್ಷ. ಈ ಸಂಬಂಧ ತೇನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಜಯ್ ಆಂಟೋನಿಗೆ ಮೀರಾ ಮತ್ತು ಲಾರಾ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದರು. ಚಿಕ್ಕಮಗಳು ಮೀರಾ ಆತ್ಮಹತ್ಯೆ ಮಾಡಿಕೊಂಡು, ಜೀವನವನ್ನೆ ಕೊನೆಯಾಗಿಸಿಕೊಂಡಿದ್ದಾಳೆ.
ವಿಜಯ್ ಆಂಟೋನಿ ತಮಿಳಿನ ಜನಪ್ರಿಯ ಸಂಗೀತ ಸಂಯೋಜಕ, ಹಾಡುಗಾರ, ನಟ, ನಿರ್ದೇಶಕರಾಗಿ ಗುರುತಿಸಿಕೊಂವರು. ಹಲವು ವರ್ಷಗಳಿಂದ ಇಂಡಸ್ಟ್ರಿರುವ ವಿಜಯ್ ಆಂಟೋನಿ ಹಲವು ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ. ಪಿಚ್ಚಕಾರನ್, ಪಿಚ್ಚಕಾರನ್ 2, ಸೈತಾನ್, ಕಾಳಿ, ಕೊಲೆಗಾರನ್, ಕುಡಿ ಒರುವನ್, ತಮಿಳ್ ಅರಸನ್ ಸೇರಿ ಹಲವು ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















