ಚೆನ್ನೈ; ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಕೊಟ್ಟ ಬಳಿಕ ಇದೀಗ ಅವಿರೋಧ ಆಯ್ಕೆ ಮಾಡಲಾಗಿದೆ. ಆ ಸ್ಥಾನಕ್ಕೆ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ಇವರನ್ನೇ ಅವಿರೋಧವಾಗಿ ಆಯ್ಕೆ ಮಾಡಲು ಕಾರಣವೂ ಇದೆ. ಇಂದು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಗೆ ಸಮಯ ನೀಡಲಾಗಿತ್ತು. ಆದರೆ ನೈನಾರ್ ನಾಗೇಂದ್ರನ್ ಅವರನ್ನೇ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಅಣ್ಣಾಮಲೈ ಅವರು ಕೂಡ ನೈನಾರ್ ನಾಗೇಂದ್ರನ್ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಬಿಜೆಪಿಯ ಇತರ ನಾಯಕರು ಕೂಡ ಅದನ್ನು ಅನುಮೋದಿಸಿದರು. ನೈನಾರ್ ನಾಗೇಂದ್ರನ್ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಅಧಿಕೃತ ಘೋಷಣೆಯನ್ನು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಿಂದ ಮಾಡಲಾಗುತ್ತದೆ.

ಇತ್ತೀಚೆಗಷ್ಟೇ ಅಣ್ಣಾಮಲೈ ತಾವೂ ಬಿಜೆಪಿ ರಾಜ್ಯಾಧ್ಯಕ್ಷನ ರೇಸ್ ನಲ್ಲಿ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದರು. ಹೀಗಾಗಿ ನೈನಾರ್ ನಾಗೇಂದ್ರ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಈ ಹುದ್ದೆಗೆ ವನತಿ ಶ್ರೀನಿವಾಸನ್ ಮತ್ತು ತಮಿಳಿ ಸೈ ಸೌಂದರರಾಜನ್ ಅವರಂತಹ ಹೆಸರುಗಳ ಬಗ್ಗೆ ಊಹಾಪೋಹಗಳಿದ್ದರೂ ಅಂತಿಮವಾಗಿ ನಾಗೇಂದ್ರನ್ ಆಯ್ಕೆಯಾಗಿದ್ದಾರೆ. ತಿರುನಲ್ವೇಲಿಯ ಪ್ರಮುಖ ತೇವರ್ ಸಮುದಾಯ್ ನಾಯಕ ಮತ್ತು ಬಿಜೆಪಿಯ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ಘೋಷಣೆ ಮಾಡುವ ಬಗ್ಗೆ ಬಿಜೆಪು ಹೈಕಮಾಂಡ್ ಕೂಡ ಒಲವು ಹೊಂದಿತ್ತು ಎಂದು ಬಹು ಮೂಲಗಳು ದೃಢಪಡಿಸಿವೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರ ನೋಂದಣಿಗೆ ಚುನಾವಣೆ ಘೋಷಣೆಯಾಗಿತ್ತು. ಒಂದಕ್ಕಿಂತ ಹೆಚ್ಚು ವ್ಯಕಗತಿಗಳು ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಜಿ ಸಲ್ಲಿಸಿದರೆ ಏಪ್ರಿಲ್ 12ರಂದು ಚುನಾವಣೆ ನಡೆಯಲಿದೆ ಎಂದು ಹೇಳಲಾಗಿತ್ತು.

