ಚೆನ್ನೈ: ತಮಿಳುನಾಡಿನ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್ ಜಿ ಸೂರ್ಯ ಅವರನ್ನು ಬಂಧಿಸಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ ಸೂರ್ಯ ಅವರನ್ನು ಬಂಧಿಸಲಾಗಿದೆ. ಸೂರ್ಯ ಬಂಧನವಾಗುತ್ತಿದ್ದಂತೆ ಸಿಎಂ ಸ್ಟಾಲಿನ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕೆಂಡಕಾರಿದ್ದಾರೆ.
ಚರಂಡಿ ಸ್ವಚ್ಛಗೊಳಿಸುವಾಗ ನೈರ್ಮಲ್ಯ ಕಾರ್ಯಕರ್ತೆಯೊಬ್ಬರು ಸಾವನ್ನಪ್ಪಿದ್ದಾರೆ. ಆದರೆ ಸಂಸದ ವೆಂಕಟೇಶನ್ ಅವರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಸೂರ್ಯ ಅವರು ಟ್ವೀಟ್ ಮಾಡಿದ್ದರು. ಆದರೆ ಆ ರೀತಿಯ ಯಾವುದೇ ಘಟನೆ ನಡೆದಿರಲಿಲ್ಲ. ಹೀಗಾಗಿ ಸುಳ್ಳು ಸುದ್ದಿ ಹಬ್ಬಿಸಿದ್ದಕ್ಕಾಗಿ ಸೂರ್ಯ ಅವರನ್ನು ಅರೆಸ್ಟ್ ಮಾಡಲಾಗಿದೆ.
ಮಧುರೈ ಪೊಲೀಸ್ ಕಮಿಷನರ್ ನರೇನ್ ತಿರನ್ ನಾಯರ್ ಈ ಸಂಬಂಧ ಸ್ಪಷ್ಟನೆ ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಶಾಂತಿ ಕದಡುವ ಕೆಲಸ ಮಾಡಿದ್ದಾರೆ. ಆ ರೀತಿಯ ಪೋಸ್ಟ್ ಹಾಕಿದ್ದಕ್ಕೆ ಅವರನ್ನು ಅರೆಸ್ಟ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.