Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಬರಿ’ ಚಿತ್ರದ ‘ತಂದಾನಿ ತಾನೋ’ ವೀಡಿಯೋ ಸಾಂಗ್ ಬಿಡುಗಡೆ: ಕುತೂಹಲ ಮೂಡಿಸಿದ ಹೊಸಬರ ಪ್ರಯತ್ನ

---Advertisement---

 

ಒರಟ ಶ್ರೀ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಶಬರಿ’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿತ್ತು. ಇದರ ಬೆನ್ನಲ್ಲೇ ಚಿತ್ರತಂಡ ತನ್ನ ಬಹುನಿರೀಕ್ಷಿತ “ತಂದಾನಿ ತಾನೋ” ವೀಡಿಯೋ ಹಾಡನ್ನು ಅನಾವರಣಗೊಳಿಸಿದೆ. ಹಿರಿಯ ನಿರ್ದೇಶಕ ಓಂ ಪ್ರಕಾಶ್ ರಾವ್, ರಘು ರಾಮ್, ಬಾಲಾಜಿ ವೀರಾಸ್ವಾಮಿ ಹಾಗೂ ಉದ್ಯಮಿ ವಿ. ಬಾಬು ಅವರು ಈ ವಿಶೇಷ ಹಾಡನ್ನು ಬಿಡುಗಡೆ ಮಾಡಿ, ಯುವ ತಂಡದ ಪ್ರಯತ್ನಕ್ಕೆ ಶುಭ ಹಾರೈಸಿದ್ದಾರೆ.

​ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಓಂಪ್ರಕಾಶ್ ರಾವ್ ಮತ್ತು ಬಾಲಾಜಿ ವೀರಾಸ್ವಾಮಿ, ಈ ವೀಡಿಯೋ ಹಾಡು ಅತ್ಯಂತ ಅದ್ಭುತವಾಗಿ ಮೂಡಿಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಬಿ. ಆರ್. ಹೇಮಂತ್ ಕುಮಾರ್ ಅವರ ಸಂಗೀತ ಸಂಯೋಜನೆ ಮನಸ್ಸಿಗೆ ಮುಟ್ಟುವಂತಿದ್ದು, ‘ಸರೆಗಮಪ’ ಖ್ಯಾತಿಯ ಅಶ್ವಿನ್ ಶರ್ಮಾ ಧ್ವನಿಯಲ್ಲಿ ಹಾಡು ಚಂದವಾಗಿ ಮೂಡಿಬಂದಿದೆ. ಹಾಡಿನಲ್ಲಿ ಕಾಣಿಸಿಕೊಂಡಿರುವ ಸಮರ್ಥ್ ಹಾಗೂ ಧನ್ವಿ ಎಲ್ಲೂ ಹೊಸಬರಂತೆ ಕಾಣಿಸದೆ, ತಮ್ಮ ಪಾತ್ರಗಳಿಗೆ ಜೀವ ತುಂಬಿದ್ದಾರೆ ಎಂದು ಪ್ರಶಂಸಿದರು. ರಘುರಾಮ್ ಸಹ ಹೊಸಬರ ಈ ಹೊಸ ಪ್ರಯತ್ನಕ್ಕೆ ಮನಸೋತು ಸಾಥ್ ನೀಡಿದ್ದಾರೆ.

​ಚಿತ್ರದ ನಿರ್ದೇಶಕ ಒರಟ ಶ್ರೀ ಅವರೇ ಸ್ವತಃ ಈ ಹಾಡಿಗೆ ಸಾಹಿತ್ಯ ಬರೆದಿದ್ದು, ಶೂಟಿಂಗ್ ಸ್ಪಾಟ್‌ನಲ್ಲೇ ಹಾಡಿನ ಸಾಲುಗಳು ಹುಟ್ಟಿಕೊಂಡ ಬಗೆಯನ್ನು ಹಂಚಿಕೊಂಡಿದ್ದಾರೆ. ಸಿನಿಮಾದಲ್ಲಿ ಸಮರ್ಥ್ ಮತ್ತು ಧನ್ವಿ ಜೊತೆಗೆ ಅವರು ಬಳಸಿದ ಜೀಪ್ ಕೂಡ ಪ್ರಮುಖ ಪಾತ್ರ ವಹಿಸಲಿದ್ದು, ಕಥೆಯಲ್ಲಿ ಸಸ್ಪೆನ್ಸ್ ಥ್ರಿಲ್ಲರ್ ಸೇರಿದಂತೆ ಹಲವು ಕುತೂಹಲಕಾರಿ ಅಂಶಗಳಿವೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

​ವರವಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ಸಿವಿಲ್ ಇಂಜಿನಿಯರ್ ರಮೇಶ್, ಸುಧಾಕರ್ ರೆಡ್ಡಿ ಯಾಕಸಿರಿ ಹಾಗೂ ವಿಷ್ಣುಕಾಂತ್ ಎ ಜೊತೆಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಒರಟ ಶ್ರೀ ಅವರ ನಿರ್ದೇಶನದ ಈ ಸಿನಿಮಾದಲ್ಲಿ ಸಮರ್ಥ್ ಹಾಗೂ ಕೃತಿಕಾ ಗೌಡ ನಾಯಕ-ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಧನ್ವಿ, ಎಂ.ಕೆ. ಮಠ, ನೀನಾಸಂ ಅಶ್ವತ್, ಸೀತಾ ಹರ್ಷವರ್ಧನ್, ಯೋಗೇಶ್ ವೀರ್ ಮತ್ತು ಮಂಡ್ಯ ಸಿದ್ದು ತಾರಾಗಣದಲ್ಲಿದ್ದಾರೆ. ಬಿ.ಆರ್. ಹೇಮಂತ್ ಕುಮಾರ್ ಸಂಗೀತ, ಸಾಮ್ರಾಟ್ ನಾಗರಾಜ್ ಛಾಯಾಗ್ರಹಣ, ಕೆ. ಗಿರೀಶ್ ಕುಮಾರ್ ಸಂಕಲನ ಹಾಗೂ ಕೋರ ಚಿನ್ನಯ್ಯ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಿತ್ರದುರ್ಗ | ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ, ಸಂತ್ರಸ್ತೆಗೆ 4 ಲಕ್ಷ ರೂ. ಪರಿಹಾರ ; ಕೋರ್ಟ್​ ಆದೇಶ

ಚಿತ್ರದುರ್ಗ : ಬರ, ಭದ್ರಾ ಮೇಲ್ದಂಡೆ, ಗ್ಯಾರಂಟಿ ರಿಪೋರ್ಟ್ ರೆಡಿ ಇಟ್ಟುಕೊಳ್ಳಿ: ಸಿಎಂ ಸಭೆಗೂ ಮುನ್ನ ಅಧಿಕಾರಿಗಳಿಗೆ ಡಿಸಿ ಟಿ.ವೆಂಕಟೇಶ್ ಸೂಚನೆ

ಚಿತ್ರದುರ್ಗ : ಬೀದಿಗಿಳಿದು ಸೂಕ್ತ ಉತ್ತರ ನೀಡಲಿದ್ದೇವೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ಎಂ.ಎಲ್.ಸಿ.ನವೀನ್ ಮುನ್ನೆಚ್ಚರಿಕೆ

ಶಾಸಕ ​ಟಿ. ರಘುಮೂರ್ತಿಗೆ ಸಚಿವ ಸ್ಥಾನ ನೀಡಲು ‘ಯುವ ಸೇನೆ’ ಪಟ್ಟು: ಬರಗೇರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ!

ಚಿತ್ರದುರ್ಗದಲ್ಲಿ ‘ದುರ್ಗೋತ್ಸವ’ ಆಚರಣೆಗೆ ಅಗ್ರಹ: ಸರ್ಕಾರದ ಗಮನಸೆಳೆಯಲು ಗಣೇಶ್ ಏಕಾಂಗಿ ಪ್ರತಿಭಟನೆ!

ಚಿತ್ರದುರ್ಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತರ ಆಗ್ರಹ: ರೈತ ಸಂಘ-ಹಸಿರುಸೇನೆಯಿಂದ ಪ್ರತಿಭಟನೆ